www.bantwalnews.com REPORT
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಡೆಸಲಾಗುವ ಬೆಳೆ ಸಮೀಕ್ಷಾ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯು ತಹಶೀಲ್ದಾರ್ ಪುರಂದರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ನಡೆಯಿತು.
ಬಂಟ್ವಾಳ ತಾಲೂಕಿನಲ್ಲಿ ಬೆಳೆ ಸಮೀಕ್ಷಾ ಕಾರ್ಯ ಈಗಾಗಲೇ ಆರಂಭಿಸಲಾಗಿದ್ದು, ಕಂದಾಯ ಅಧಿಕಾರಿಗಳು, ಸಿಬ್ಬಂದಿಗಳು ಕ್ಷೇತ್ರ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ಬಂಟ್ವಾಳ, ಪಾಣೆಮಂಗಳೂರು, ವಿಟ್ಲ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳೆ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ.
ಸಮೀಕ್ಷಾ ಕಾರ್ಯ ಪ್ರಗತಿ ಪರಿಶೀಲನೆಗಾಗಿ ನಡೆಸಲಾದ ಸಭೆಯಲ್ಲಿ ಅಧಿಕಾರಿಗಳು ಅಭಿಪ್ರಾಯ ಮಂಡಿಸಿದರು.
ಉಪತಹಶೀಲ್ದಾರ್ ಗಳಾದ ಗೋಪಾಲ್, ಸೀತಾರಾಂ, ಗ್ರೆಟ್ಟಾ ಮಸ್ಕರೇಂಜಸ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ ಮುಗುಳಿಯ, ನವೀನ ಬೆಂಜನಪದವು, ನಿಯೋಜಿತ ಸಮೀಕ್ಷಾ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಸಭೆಯಲ್ಲಿ ಹಾಜರಿದ್ದರು.
ಸಮೀಕ್ಷಾ ಕಾರ್ಯಕ್ಕೆ ಗಡುವು:
ಬೆಳೆ ಸಮೀಕ್ಷಾ ಮಾಹಿತಿಯನ್ನು ದಾಖಲಿಸುವ ಕಾರ್ಯವನ್ನು ಅತೀ ಶೀಘ್ರದಲ್ಲಿ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಈ ಸಮೀಕ್ಷಾ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸುವಂತೆ ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದರು. ಸಮೀಕ್ಷಾ ಕಾರ್ಯದ ಬಗ್ಗೆ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು.