www.bantwalnews.com
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದೆ.


ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ ಮಕ್ಕಳ ದತ್ತು ಸ್ವೀಕಾರ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು, ವೃತ್ತಿ ಮಾರ್ಗದರ್ಶನ ಶಿಬಿರ, ಆಶಕ್ತರಿಗೆ ಆರೋಗ್ಯ ನೆರವು, ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ, ಹೀಗೆ ನೂರಾರು ಕಾರ್ಯಕ್ರಮಗಳನ್ನು ಯುವವಾಹಿನಿಯು ನಡೆಸುತ್ತಾ ಬಂದಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರ ೩೦ ವರುಷಗಳ ಸೇವೆಯನ್ನು ನೀಡುತ್ತಾ ಬರುತ್ತಿರುವ ಯುವವಾಹಿನಿ ಸಾಹಿತ್ಯಿಕ ಸೇವೆಯನ್ನು ನಡೆಸುತ್ತಿದ್ದು ಹಿರಿಯ ಸಾಹಿತಿ ದಿವಂಗತ ವಿಶುಕುಮಾರ್ ಅವರ ಹೆಸರಿನಲ್ಲಿ ವಿಶುಕುಮಾರ್ ಪ್ರಶಸ್ತಿಯನ್ನೂ ನೀಡುತ್ತಾ ಬರುತ್ತಿದೆ. www.bantwalnews.com Congrats Yuvavahini


Be the first to comment on "ಯುವವಾಹಿನಿ ಸಾಧನೆಗೆ ಜಿಲ್ಲಾ ಪ್ರಶಸ್ತಿಯ ಗರಿ"