ಕನ್ನಡ ನಮ್ಮ ಮಾತೃ ಭಾಷೆ ಕನ್ನಡದ ನೆಲದಲ್ಲಿ ಜನಿಸಿದ ನಾವು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಬ್ದಾರಿಯನ್ನು ಹೊಂದಿದ್ದೇವೆ. ಇದನ್ನು ಸರಿಯಾಗಿ ಅರಿತು ನಿಭಾಯಿಸಬೇಕು ಎಂದು ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್ ಹೇಳಿದರು.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯರಾದ ವಿಜಯಲಕ್ಷ್ಮೀವಿ.ಶೆಟ್ಟಿ , ಗ್ರೇಸ್.ಪಿ. ಸಲ್ಡಾನಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.