ಗೋಸಂರಕ್ಷಣೆ ಅರಿವು ಸಮಾಜಕ್ಕೆ ಅಗತ್ಯವಾಗಿದೆ. ಅಭಯಾಕ್ಷರ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಶುಕ್ರವಾರ ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ಬಂಟ್ವಾಳ, ಮಂಗಳೂರು, ಮೂಡಬಿದ್ರೆ ತಾಲೂಕು ಗೋ ಪರಿವಾರ ಸಭೆಯಲ್ಲಿ ಮಾತನಾಡಿದರು.
ಬೆಂಗಳೂರಿನಲ್ಲಿ ಈಗಾಗಲೇ ಅಭ್ಯಯಾಕ್ಷರ ಅಭಿಯಾನದಲ್ಲಿ 10 ಲಕ್ಷ ಸಹಿ ಸಂಗ್ರಹವಾಗಿದೆ. ದ.ಕ. ಜಿಲ್ಲೆಯಲ್ಲೂ ಹಿಂದು, ಮುಸ್ಲಿಂ ಮತ್ತು ಕ್ರೈಸ್ತ ಬಾಂಧವ ಗೋಪ್ರೇಮಿಗಳೂ ಅಭಯಾಕ್ಷರ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ರಾಜ್ಯ ಗೋಪರಿವಾರ ಕಾರ್ಯದರ್ಶಿ ಅರವಿಂದ ಬಂಗಲಕಲ್ಲು, ಅಭಿಯಾನದ ಜಿಲ್ಲಾಧ್ಯಕ್ಷ ರಾಜೇಶ್ ನಾಯಕ್ ಉಳಿಪ್ಪಾಡಿ, ಪ್ರಧಾನ ಕಾರ್ಯದರ್ಶಿಮುರಳೀಕೃಷ್ಣ ಹಸಂತಡ್ಕ, ಪ್ರಾಂತ ಸಂಘಟನಾ ಕಾರ್ಯದರ್ಶಿ ಶಿವರಂಜನ್ ಪುತ್ತೂರು, ರಾಜ್ಯ ಜನನೀ ವಿಭಾಗ ಅಧ್ಯಕ್ಷೆ ಶೈಲಜಾ ಕೆ.ಟಿ.ಭಟ್, ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ಸಚಿನ್ ಮೇಲ್ಕಾರ್, ಉಪಾಧ್ಯಕ್ಷ ಪ್ರಕಾಶ್ ರಾವ್ ಕೆ, ಪ್ರ.ಕಾರ್ಯದರ್ಶಿ ಉಮೇಶ್ ಡಿ.ಎಂ.ಅರಳ, ಕಾರ್ಯಾಲಯ ಕಾರ್ಯದರ್ಶಿ ಸುದರ್ಶನ ಮೇಲ್ಕಾರ್, ಧೀರೇಶ್ ರಾವ್ ಮೇಲ್ಕಾರ್, ಗಿರಿಧರ ಬೋಳಂಗಡಿ, ಅಖಿಲ ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಪ್ಪು, ಹವ್ಯಕ ವಲಯಾಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಪ್ರಮುಖರಾದ ಉದಯ ಕುಮಾರ್ ಖಂಡಿಗ, ಕಲ್ಲಡ್ಕ ಉಮಾಶಿವ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್, ಮುಳ್ಳುಂಜ ವೆಂಕಟೇಶ್ವರ ಭಟ್, ಡಾ.ಪಾದೇಕಲ್ಲು ವಿಷ್ಣು ಭಟ್ ಮೊದಲಾದವರು ಉಪಸ್ಥಿತರಿದ್ದರು.