ಬಂಟ್ವಾಳ

ನವಕರ್ನಾಟಕ ಪರಿವರ್ತನಾ ಯಾತ್ರೆಗೆ 25 ಸಾವಿರ ಮಂದಿ ನಿರೀಕ್ಷೆ: ರಾಜೇಶ್ ನಾಯ್ಕ್

www.bantwalnews.com

ಜಾಹೀರಾತು

ಸುಮಾರು 25 ಸಾವಿರ ಜನರು ಬಿ.ಸಿ.ರೋಡಿನಲ್ಲಿ ನ.11ರಂದು ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಬಹಿರಂಗ ಸಭೆಯ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ಪುಂಜಾಲಕಟ್ಟೆಯಲ್ಲಿ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಈ ಸಂದರ್ಭ ಬೈಕುಗಳಲ್ಲಿ ಕಾರ್ಯಕರ್ತರು ಅಲ್ಲಿಗೆ ತೆರಳಿ ಬಳಿಕ ಮೆರವಣಿಗೆ ಮೂಲಕ ಬಿ.ಸಿ.ರೋಡಿಗೆ ಬರಲಾಗುವುದು ಎಂದು ಮಾಹಿತಿ ನೀಡಿದರು.

ಜಾಹೀರಾತು

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ, ಪ್ರಮುಖರಾದ ಎ.ಗೋವಿಂದ ಪ್ರಭು, ಜಿ.ಆನಂದ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ನೇಮಿರಾಜ ಶೆಟ್ಟಿ, ಆನಂದ ಶಂಭೂರು, ರಮಾನಾಥ ರಾಯಿ, ರೊನಾಲ್ಡ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

VIDEO REPORT Click:

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ