ಬಿ.ಸಿ.ರೋಡಿನಲ್ಲಿ 98 ಮಂದಿಗೆ ಉಚಿತ ಹಿಜಾಮ ಚಿಕಿತ್ಸೆ

www.bantwalnews.com

ಜಾಹೀರಾತು

ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ಹಾಗೂ ಯು.ಟಿ.ಖಾದರ್ ಅಭಿಮಾನಿಗಳು ಮಂಗಳೂರು ಇದರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ .5 ರಂದು ಉಚಿತ ಹಿಜಾಮ ಚಿಕಿತ್ಸಾ ಶಿಬಿರ ನೇತಾಜಿ ಸುಭಾಸ್ ಚಂದ್ರ ಬೋಸ್ ಪ್ರೌಢ ಶಾಲೆ ಕೊಡಂಗೆ, ಬಿ.ಸಿ.ರೋಡ್ ನಲ್ಲಿ ನಡೆಯಿತು. ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಜಾಮ ಬಗ್ಗೆ ವಿವರಿಸಿ ಶುಭಹಾರೈಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಉದ್ಘಾಟಿಸಿ ಹಿಜಾಮ ಚಿಕಿತ್ಸೆಯನ್ನು ಜನರಿಗೆ ಪರಿಚಯಿಸುವಲ್ಲಿ ಜವಾನ್ ಫ್ರೆಂಡ್ಸ್ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಕ್ಯಾಂಪ್ನಲ್ಲಿ 98 ಜನರು ಹಿಜಾಮ ಚಿಕಿತ್ಸೆಯನ್ನು ಪಡೆದರು. ಮಿತ್ತಬೈಲು ಜುಮಾ ಮಸೀದಿ ಖತೀಬ್ ಎಂ.ವೈ.ಅಶ್ರಫ್ ಫೈಝಿ ದುವಾ ನೆರವೇರಿಸಿದರು.

ವೆನ್ಲಾಕ್ ಜಿಲ್ಲಾಸ್ಪತ್ರೆಯ ಯುನಾನಿ ವೈದ್ಯರಾದ ಡಾ. ಸಯ್ಯದ್ ಝಾಹಿದ್ ಹುಸೈನ್ ಮತ್ತು ಡಾ.ನೂರುಲ್ಲಾ ಹಿಜಾಮ ಕ್ಯಾಂಪ್ ನಡೆಸಿಕೊಟ್ಟರು. ಮುಖ್ಯ ಅಥಿತಿಗಳಾಗಿ ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷ ಬಿ.ಹೆಚ್.ಖಾದರ್, ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಬಿ.. ಮಹಮ್ಮದಾಲಿ ಕಮ್ಮರಡಿ, ಕರ್ನಾಟಕ ರಾಜ್ಯ ಹಜ್ ಸಮಿತಿ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಅರಫಾ ಜುಮಾ ಮಸೀದಿ ಖತೀಬ್ ಮುಹ್ಸಿನ್ ಫೈಝಿ, ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ನಗರಾಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರಾ, ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯ ಶರೀಫ್ ಶಾಂತಿಅಂಗಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಖ್ ಪುದು, ..ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್, ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಶಿರ್ ಪೇರಿಮಾರ್, ಮಿತ್ತಬೈಲು ಜುಮಾ ಮಸೀದಿ ಸದಸ್ಯ ಅಹಮ್ಮದ್ ಕುಂಞ್ಞಿ ನಂದರಬೆಟ್ಟು, ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ, ಪರ್ಲಿಯಾ ಅರಫಾ ಜುಮಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಸಾಗರ್, ಪರ್ಲಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹಮದ್ ಬಾವ ಕಡ್ಪಿಕರಿಯ, ಮಿತ್ತಬೈಲು ಜುಮಾ ಮಸೀದಿ ಉಪಾಧ್ಯಕ್ಷ ಇಬ್ರಾಹಿಂ ಬೋಗೋಡಿ, ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ದಕ ಜಿಲ್ಲಾ ಇಂಟಕ್ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಳ, ನೂರಾನಿಯಾ ಎಸೋಸಿಯೇಶನ್ ಅಧ್ಯಕ್ಷ ಇಕ್ಬಾಲ್ .ಕೆ., ಅಕ್ಷರ ಪತ್ರಿಕೆ ಸಂಪಾದಕ ಇಸ್ಮಾಯಿಲ್ ಬಿ.ಎಸ್., ಕೊಡಂಗೆ ಶಾಲಾ ಮುಖ್ಯಶಿಕ್ಷಕ ಭಾಸ್ಕರ್, ಶಿಕ್ಷಣ ಇಲಾಖೆಯ ರಾಜೇಶ್ ಸುವರ್ಣ, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಇಬ್ರಾಹಿಂ ಕೊಡಂಗೆ, ಸೈಫುಲ್ಲಾ ಪರ್ಲಿಯಾ, ಹುಸೈನ್ ರಿಯಾಝ್, ಕೊಡಂಗೆ ಶಾಲಾ ಎಸ್.ಡಿ.ಎಂ.ಸಿ ಸದಸ್ಯರಾದ ಹನೀಫ್, ಇಬ್ರಾಹಿಂ, ಅಯ್ಯೂಬ್, ಖಾದರ್ ನಂದರಬೆಟ್ಟು, ನೌಷಾದ್ ನಂದರಬೆಟ್ಟು ಯಾಸಿರ್ ಬಂಟ್ವಾಳ, ನೌಫಲ್ ಬಂಟ್ವಾಳ, ಯು.ಟಿ.ಖಾದರ್ ಅಭಿಮಾನಿ ಬಳಗದ ಇಸ್ಮಾಯಿಲ್ ಪಡ್ಪಿನಂಗಡಿ, ಅಬೂಬಕರ್ ಅನಿಲಕಟ್ಟೆ, ಸಿರಾಜ್ ಮದಕ, ನವಾಝ್ ಕೈಕಂಬ, ಆಸಿಫ್ ವಿಟ್ಲ, ಫೌಸಿಲ್ ನೆಕ್ಕರೆ, ರಿಯಾಝ್ ಬೊಳ್ಳಾಯಿ, ಮುಹಮ್ಮದ್ ಅಲಿ ಜೌಹರ್ ಕುಕ್ಕಾಜೆ, ಇಸ್ಮಾಯಿಲ್ ಕೋಲ್ಪೆ, ಜವಾನ್ ಫ್ರೆಂಡ್ಸ್ ಅಧ್ಯಕ್ಷ ರಿಯಾಝ್ ಜವಾನ್, ಸದಸ್ಯರಾದ ಸತ್ತಾರ್ ನಂದರಬೆಟ್ಟು, ನಝೀರ್ ಪರ್ಲಿಯಾ, ನೌಶಾದ್ ವಗ್ಗ ಮತ್ತು ಆಶಿಕ್ ಕುಕ್ಕಾಜೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಝಾಲಿ ನಿರೂಪಿಸಿದರು ತನ್ಸೀಫ್ ಬಿ.ಎಂ. ಸ್ವಾಗತಿಸಿ ರೆಹಮಾನ್ ಖಾನ್ ಕುಂಜತ್ತಬೈಲ್ ವಂದಿಸಿದರು

ಸನ್ಮಾನ:

ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಆಪ್ತಸಹಾಯಕ ಮೊಹಮ್ಮದ್ ಲಿಬ್ಝತ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೊಡಂಗೆಯ ಅಧ್ಯಕ್ಷ ಬಿ.ಎಂ. ಇಸ್ಮಾಯಿಲ್ ಮತ್ತು ಸಾಮಾಜಿಕ ಕಾರ್ಯಕರ್ತ ಸಮದ್ ಕೈಕಂಬ ಅವರನ್ನು ಸಚಿವ ರಮಾನಾಥ ರೈ ಸನ್ಮಾನಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡಿನಲ್ಲಿ 98 ಮಂದಿಗೆ ಉಚಿತ ಹಿಜಾಮ ಚಿಕಿತ್ಸೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*