www.bantwalnews.com
ನೋಟ್ ಬ್ಯಾನ್ ನಿಂದ ನಿರುದ್ಯೋಗಿಗಳ ಸಂಖ್ಯೆ ಜಾಸ್ತಿಯಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಿ.ಸಿ.ರೋಡಿನಲ್ಲಿ ಬುಧವಾರ ಕೇಂದ್ರ ಸರಕಾರದ ನೋಟ್ ಬ್ಯಾನ್ ಮಾಡಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಮಾತನಾಡಿದ ಸಚಿವ ರೈ, ಇಂದು ಆರ್ಥಿಕ ಸ್ಥಿತಿ ಹದಗೆಟ್ಟಿದೆ. ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರುತ್ತಿದೆ. ಆದರೂ ಪ್ರಧಾನಿ ಅಚ್ಚೇ ದಿನ್ ಬರುತ್ತದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯ ಕೆಲ ಕಾರ್ಯಕರ್ತರು ಒಳ್ಳೆಯದಾಗಿದೆ ಎಂದು ಹೇಳುತ್ತಿದ್ದಾರೆ ಯಾರಿಗೆ ಒಳ್ಳೆಯದಾಗಿದೆ ಎಂದು ರೈ ಪ್ರಶ್ನಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಪಕ್ಷ ಪ್ರಮುಖರಾದ ಜನಾರ್ದನ ಚಂಡ್ತಿಮಾರ್ ಮೊದಲಾದವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಯೂಸುಫ್ ಕರಂದಾಡಿ, ಶರೀಫ್ ಶಾಂತಿಅಂಗಡಿ, ವಸಂತಿ ಚಂದಪ್ಪ, ಅಬೂಬಕ್ಕರ ಸಿದ್ದೀಕ್ ಗುಡ್ಡೆಅಂಗಡಿ, ಪ್ರಶಾಂತ್ ಕುಲಾಲ್, ಗಂಗಾಧರ್, ಮುಹಮ್ಮದ್ ನಂದಾವರ, ಸಿದ್ದೀಕ್ ಸರವು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಮಹೇಶ್ ನಾಯಕ್ ಖಂಡಿಗ, ವೆಂಕಪ್ಪ ಪೂಜಾರಿ, ಶ್ರೀಧರ್ ರೈ, ಮಧುಸೂಧನ ಶೆಣೈ, ಬಿ ಕೆ ಇದ್ದಿನಬ್ಬ ಕಲ್ಲಡ್ಕ, ಐಡಾ ಸುರೇಶ್, ಹಸೈನಾರ್, ಆದಂ ಪಲ್ಲ, ಕಾಸಿಂ ಶಾಂತಿಅಂಗಡಿ, ಮಹಮ್ಮದ್ ನಂದಾವರ ಮತ್ತಿತರರು ಉಪಸ್ಥಿತರಿದ್ದರು. ಪ್ರತಿಭಟನೆ ಬಳಿಕ ಮಿನಿ ವಿಧಾನಸೌಧದಲ್ಲಿ ಮನವಿ ಅರ್ಪಿಸಲಾಯಿತು.