ಮುಲ್ಲರಪಟ್ಣ ಘಟನೆ: ರೈ ಸಾಂತ್ವನ

www.bantwalnews.com

ಜಾಹೀರಾತು

ಅರಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಈಜಲೆಂದು ತೆರಳಿದ್ದ ಐವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯ ಶಾಕ್ ನಿಂದ ಮುಲ್ಲರಪಟ್ಣ ಹೊರಬಂದಿಲ್ಲ. ಬುಧವಾರವೂ ಶುಂಠಿಹಿತ್ಲು, ಮುಲ್ಲರಪಟ್ಣ ಪರಿಸರದಲ್ಲಿ ನೀರವ ಮೌನ ಆವರಿಸಿತ್ತು.

ಸರಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಸಚಿವ ರಮಾನಾಥ ರೈ ಅವರು ಮಂಗಳವಾರ ರಾತ್ರಿ ಆಗಮಿಸಿ ಮೃತ ಬಾಲಕರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಕುಟುಂಬಗಳಿಗೆ ಗರಿಷ್ಠ ಪ್ರಮಾಣದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

ಮುಲ್ಲರಪಟ್ಣ, ಶುಂಠಿಹಿತ್ಲು ಪರಿಸರ ನಿವಾಸಿಗಳಾದ ಮುಹಮ್ಮದ್ ಸವಾದ್, ಅಝ್ಮಲ್, ಮುದಸ್ಸಿರ್, ರಮೀಝ್ ಮತ್ತು ಅಸ್ಲಂ ಮೃತಪಟ್ಟ ಬಾಲಕರಾಗಿದ್ದರು.

ಸೋಮವಾರ ಕನಕ ಜಯಂತಿಯ ಪ್ರಯುಕ್ತ ಶಾಲೆಗೆ ರಜೆಯಿದ್ದ ಕಾರಣ ಎಲ್ಲರು ಜೊತೆಯಾಗಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸ್ಥಳೀಯ ಮೈದಾನವೊಂದರಲ್ಲಿ ಎಲ್ಲರು ಒಟ್ಟಾಗಿ ಆಟವಾಡಿ, ಬಳಿಕ ಈಜಾಡಲೆಂದು ಫಲ್ಗುಣಿ ನದಿಗೆ ತೆರಳಿದ್ದ ವೇಳೆ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.

ಬೆಳಿಗ್ಗೆ ಸವಾದ್ ಶವ ಪತ್ತೆಯಾಗಿದ್ದರೆ, ಮಧ್ಯಾಹ್ನ ಸುಮಾರು 12 ಗಂಟೆಯ ಹೊತ್ತಿಗೆ ಪೊದೆಯೊಂದರಲ್ಲಿ ಅಝ್ಮಲ್, ರಮೀಝ್ ಹಾಗೂ ಅಸ್ಲಂ ಮೂವರ ಮೃತದೇಹ ಜೊತೆಯಲ್ಲೆ ಪತ್ತೆಯಾಗಿತ್ತು. ಬಾಲಕ ಮುದಸ್ಸಿರ್ ಎಂಬಾತನ ಮೃತದೇಹವನ್ನು ಪಾಣೆ ಮಂಗಳೂರು ಗೂಡಿನ ಈಜುಗಾರರ ತಂಡ ಹಾಗೂ ಬಂಟ್ವಾಳ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ರಾತ್ರಿ 9 ಗಂಟೆಗೆ ಪತ್ತೆಹಚ್ಚಿ ಮೇಲೆಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದರು.

 

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮುಲ್ಲರಪಟ್ಣ ಘಟನೆ: ರೈ ಸಾಂತ್ವನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*