ಬಂಟ್ವಾಳ

ನೋಟ್ ಬ್ಯಾನ್ : ಎಸ್‌ಡಿಪಿಐ ಪ್ರತಿಭಟನೆ

www.bantwalnews.com

ಜಾಹೀರಾತು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗದು ಅನಾಣ್ಯೀಕರಣದ ವಿಫಲತೆಯ ಬಗ್ಗೆ ಉತ್ತರದಾಹಿತ್ವ ದಿನ ಹಾಗೂ ಕೇಂದ್ರ ಸರಕಾರದ ಜನವಿರೋಧಿ ಧೋರಣೆ ವಿರುದ್ಧ ಬಿ.ಸಿ.ರೋಡ್ ಕೈಕಂಬ ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರನ್ನು ಉದ್ದೇಶಿಸಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್. ಮಾತನಾಡಿ, ನೋಟ್ ಬ್ಯಾನ್ ಆಗಿ ಒಂದು ವರ್ಷವಾಯಿತು. ನಿಮ್ಮ ಅಚ್ಚೇ ಎಲ್ಲಿ? ಎಂದು ಪ್ರಶ್ನಿಸಿದರು, ಪ್ರತಿಭನಟನೆಯಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ, ಎಸ್ಡಿಪಿಐ ಸದಸ್ಯ ಅಕ್ಬರ್ ಅಲಿ ಮಾತನಾಡಿದರು.

ಸಂದರ್ಭ ಎಸ್ಡಿಪಿಐ ಮುಖಂಡರಾದ ಯೂಸುಫ್ ಆಲಡ್ಕ, ಯಾಕೂಬ್ ಮದ್ದಾ ಉಪಸ್ಥಿತರಿದ್ದರು. ಮಲಿಕ್ ಕೊಳಕೆ ಸ್ವಾಗತಿಸಿ, ನಿರೂಪಿಸಿದರು.

 

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts