ಶೋಷಿತ ವರ್ಗಕ್ಕೆ ಕಾನೂನಿನ ಅರಿವು ಅಗತ್ಯ: ನ್ಯಾಯಾಧೀಶ

www.bantwalnews.com

ಜಾಹೀರಾತು

ಕಾನೂನಿನ ಅರಿವನ್ನು ಶೋಷಿತ ವರ್ಗ ಮತ್ತು ಹಿಂದುಳಿದ ವರ್ಗಕ್ಕೆ ನೀಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ನುಡಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದ ಶೋಷಿತ ವರ್ಗ ಮತ್ತು ಹಿಂದು ಳಿದ ವರ್ಗಗಳಿಗೆ ಉಚಿತ ಕಾನೂನು ನೆರವು ನೀಡಲಾಗುವುದು, ದುಶ್ಚಟಗಳ ಬಗ್ಗೆ ಅರಿವು ಮೂಡಿಸುವುದು, ಜನರಲ್ಲಿ ಕಾನೂನಿನ ಬಗ್ಗೆ ಅರಿವನ್ನುಂಟುಮಾಡುವುದು, ಕಾನೂನು ನೆರವು ಮತ್ತು ಸಲಹೆಯನ್ನು ಕೊಡುವುದು, ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಕಡಿಮೆ ಖರ್ಚಿನಲ್ಲಿ ಇತ್ಯರ್ಥಗೊಳಿಸುವ ವಿಚಾರಗಳನ್ನು ಅವರು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್ ಸಿ.ಡಿ., ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಮೈರಾನ್ ಪಾದೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು

ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು ಸ್ವಾಗತಿಸಿದರು. ನ್ಯಾಯವಾದಿ ಆಶಾಮಣಿ ಡಿ.ರೈ ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನ್ಯಾಯಾಧೀಶರು ಮೈರಾನ್ಪಾದೆಯ ಮನೆ ಮನೆಗೆ ಭೇಟಿ ನೀಡಿ ಕಾನೂನು ಮಾಹಿತಿಯ ಕರಪತ್ರ ವಿತರಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶೋಷಿತ ವರ್ಗಕ್ಕೆ ಕಾನೂನಿನ ಅರಿವು ಅಗತ್ಯ: ನ್ಯಾಯಾಧೀಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*