ಕಾನೂನಿನ ಅರಿವನ್ನು ಶೋಷಿತ ವರ್ಗ ಮತ್ತು ಹಿಂದುಳಿದ ವರ್ಗಕ್ಕೆ ನೀಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ನುಡಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದ ಶೋಷಿತ ವರ್ಗ ಮತ್ತು ಹಿಂದು ಳಿದ ವರ್ಗಗಳಿಗೆ ಉಚಿತ ಕಾನೂನು ನೆರವು ನೀಡಲಾಗುವುದು, ದುಶ್ಚಟಗಳ ಬಗ್ಗೆ ಅರಿವು ಮೂಡಿಸುವುದು, ಜನರಲ್ಲಿ ಕಾನೂನಿನ ಬಗ್ಗೆ ಅರಿವನ್ನುಂಟುಮಾಡುವುದು, ಕಾನೂನು ನೆರವು ಮತ್ತು ಸಲಹೆಯನ್ನು ಕೊಡುವುದು, ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಕಡಿಮೆ ಖರ್ಚಿನಲ್ಲಿ ಇತ್ಯರ್ಥಗೊಳಿಸುವ ವಿಚಾರಗಳನ್ನು ಅವರು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್ ಸಿ.ಡಿ., ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಮೈರಾನ್ ಪಾದೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು ಸ್ವಾಗತಿಸಿದರು. ನ್ಯಾಯವಾದಿ ಆಶಾಮಣಿ ಡಿ.ರೈ ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನ್ಯಾಯಾಧೀಶರು ಮೈರಾನ್ಪಾದೆಯ ಮನೆ ಮನೆಗೆ ಭೇಟಿ ನೀಡಿ ಕಾನೂನು ಮಾಹಿತಿಯ ಕರಪತ್ರ ವಿತರಿಸಿದರು.