ಮಾತೃಪೂರ್ಣ ಯೋಜನೆ ಮಾರ್ಪಾಡು ಕುರಿತು ಮಾತುಕತೆ: ರೈ

www.bantwalnews.com

ದ.ಕ. ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆ ಅನುಷ್ಠಾನದ ಹಿನ್ನಡೆಯ ಬಗ್ಗೆ ಅರಿವಿದೆ. ಇದು ಸರಕಾರದ ಮಟ್ಟದಲ್ಲಿ ಆಗಬೇಕಾದ ಕಾರ್ಯವಾಗಿದ್ದು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸುವುದಾಗಿ ಸಚಿವ ರಮಾನಾಥ ರೈ ಭರವಸೆ ನೀಡಿದ್ದಾರೆ.

ಜಾಹೀರಾತು

ರಾಜ್ಯ ಸರಕಾರ ಜಾರಿಗೆ ತಂದಿರುವ ಮಾತೃಪೂರ್ಣ ಯೋಜನೆಯ ಅನುಷ್ಠಾನ ಕ್ರಮಗಳನ್ನು ಮಾರ್ಪಡುಗೊಳಿಸಬೇಕು, ಅಂಗನವಾಡಿ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಕಸ ವಸ್ತಗಳ ಸಂಗ್ರಹಣೆಯನ್ನು ನಿಲ್ಲಿಸಬೇಕು, ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ವಿಮೆಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬಂಟ್ವಾಳ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಜಿಲ್ಲಾ ಉಸ್ತುವಾರಿ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿತು.

ಈ ಸಂದರ್ಭ ಸಚಿವ ರೈ ಮನವಿಗೆ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು. ಸಂಘದ ಅಧ್ಯಕ್ಷೆ ಉಮಾವತಿ ಮಾತನಾಡಿ ಸರಕಾರ ಜಾರಿಗೊಳಿಸಿರುವ ಮಾತೃಪೂರ್ಣ ಯೋಜನೆಯನ್ನು ನಾವು ಸ್ವಾಗತಿಸುತ್ತೇವೆ. ಆಧರೆ ಈ ಯೋಜನೆಯ ಯಥಾವತ್ತಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಗರ್ಭಿಣಿ, ಬಾಣಂತಿಯರು ದಿನಂಪ್ರತಿ ಅಂಗನವಾಡಿ ಕೇಂದ್ರಕ್ಕೆ ಆಹಾರ ಸೇವಿಸಲು ಬರುತ್ತಿಲ್ಲ. ತಮ್ಮ ಮನೆಗಳಿಂದ ಅಂಗನವಾಡಿ ಕೇಂದ್ರಕ್ಕೆ ಇರುವ ದೂರ ಮಳೆ, ಬಿಸಿಲು, ಏರಿಳಿತ ಪ್ರದೇಶ, ಆರೋಗ್ಯ ಸಮಸ್ಯೆ ಮೊದಲಾದ ಕಾರಣಗಳಿಂದ ಫಲಾನುಭವಿಗಳು ದಿನಂಪತ್ರಿ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಶೇ.೧೦ರಷ್ಟು ಈ ಯೋಜನೆ ಯಶಸ್ಸುನ್ನು ಕಂಡಿಲ್ಲ ಎಂದರು.

ಈ ನಡುವೆ ಪ್ಲಾಸ್ಟಿಕ್ ಮುಕ್ತ ಗ್ರಾಮದ ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳ ಪರಿಸರದ ಮನೆಗಳ ಪ್ಲಾಸ್ಟಿಕ್ ಕಸವನ್ನು ಅಂಗನವಾಡಿ ಕೇಂದ್ರಗಳಲ್ಲಿ ಶೇಖರಿಸಿ ಪಂಚಾಯಿತಿ ವ್ಯವಸ್ಥೆಯ ಮೂಲಕ ವಿಲೇವಾರಿಗೊಳಿಸುವ ಜವಬ್ದಾರಿಯನ್ನು ಕಾರ್ಯಕರ್ತೆಯರ ಮೇಲೆ ಹೊರಿಸಿ ಹೆಚ್ಚುವರಿ ಹೊರೆ ನೀಡಲಾಗಿದೆ. ಪ್ಲಾಸ್ಟಿಕ್ ಸಂಗ್ರಹಣೆಯಿಂದ ಪುಟಾಣಿ ಮಕ್ಕಳ ಪ್ರಾಣಕ್ಕೆ ಅಪಾಯಗಳು ಎದುರಾಗುವ ಭೀತಿ ಇದೆ ಎಂದು ಆರೋಪಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮತ್ತು ಕುಟುಂಬ ಸದಸ್ಯರಿಗೆ ೨ ಲಕ್ಷ ರೂ.ಗಳ ಆರೋಗ್ಯ ವಿಮೆಯನ್ನು ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷೆ ರೇಣುಕಾ ಪೊಳಲಿ, ಕಾರ್ಯದರ್ಶಿ ರೇಖಾ ಇರಾ, ಕಾರ್ಯಧ್ಯಕ್ಷೆ ಭಾರತಿ ಕೊಳ್ನಾಡು, ಉಪಾಧ್ಯಕ್ಷೆ ಜಯಶ್ರೀ ವಿಟ್ಲ, ಮಾಜಿ ಅಧ್ಯಕ್ಷೆ ವಸಂತಿ, ಸಂಘಟನಾ ಕಾರ್ಯದರ್ಶಿ ವಿಜಯವಾಣಿ ಶೆಟ್ಟಿ, ಸುಜಾತ ಬಾರಿಂಜ, ಪ್ಲಾಸಿಡ್ ಡಿಸೋಜಾ, ಶ್ರೀವಾಣಿ ಬಿ.ಸಿ.ರೋಡು, ವಲಯ ಪ್ರಮುಖರಾದ ಯಶೋಧ ಕಲ್ಲಗುಡ್ಡೆ, ಸುರೇಖಾ ಕುದ್ರೆಬೆಟ್ಟು ಮತ್ತಿತರರು ಹಾಜರಿದ್ದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾತೃಪೂರ್ಣ ಯೋಜನೆ ಮಾರ್ಪಾಡು ಕುರಿತು ಮಾತುಕತೆ: ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*