ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದು ದೇವರ ಸೇವೆ

www.bantwalnews.com

ಜಾಹೀರಾತು

ಸೇವಾಕಾರ್ಯ ನಡೆಯುವಲ್ಲಿ ಭಗವಂತನಿರುತ್ತಾನೆ. ಅನ್ನದಾನ ಶ್ರೇಷ್ಠದಾನವಾಗಿದ್ದು ದೇವರ ಸ್ವರೂಪಿಗಳಾದ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ಕೊಡುವ ವ್ಯವಸ್ಥೆಯನ್ನು ಸತ್ಯಸಾಯಿ ಭಕ್ತರ ಮೂಲಕ ಮಾಡುತ್ತಿರುವುದು ನಿಜವಾದ ದೇವರ ಸೇವೆ ಎಂದು ಸತ್ಯಸಾಯಿ ಸೇವಾ ಸಮಿತಿ ಮಾಜಿ ಸಂಚಾಲಕ ಪ್ರೊ. ಜತ್ತನಕೋಡಿ ಸುಂದರ ಭಟ್ ಹೇಳಿದರು.

ಕಡೇಶ್ವಾಲ್ಯ ದ.ಕ.ಜಿ.ಪ.ಹಿ ಪ್ರಾಥಮಿಕ ಶಾಲೆ ಮತ್ತು ಶ್ರೀ ಸತ್ಯಸಾಯಿ ಅನ್ನಪೂರ್ಣ ಸೇವಾ ಟ್ರಸ್ಟ್ ಮುದ್ದೇನಹಳ್ಳಿ ಇವರ ಆಶ್ರಯದಲ್ಲಿ ನೀಡುತ್ತಿರುವ ಬೆಳಗ್ಗಿನ ಉಪಾಹಾರ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ ಪ್ರಾಸ್ತಾವಿಕ ಮಾತನಾಡಿ ಸತ್ಯಸಾಯಿ ಬಾಬ ಅವರ ಆಶಯದಂತೆ ಸೇವೆ ಮತ್ತು ತ್ಯಾಗ ಮನೋಭಾವವನ್ನು *ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸತ್ಯಸಾಯಿ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಅನ್ನಪೂರ್ಣಸೇವಾ ಟ್ರಸ್ಟ್‌ನ ಮೂಲಕ ಬೆಳಗ್ಗಿನ ಉಪಾಹಾರದ ವ್ಯವಸ್ಥೆಯನ್ನು ರಾಜ್ಯಾದ್ಯಂತ ಕೆಲವು ಜಿಲ್ಲೆಗಳಲ್ಲಿ ಮಾಡುತ್ತಿದ್ದಾರೆ. ನಮ್ಮ ಬೇಡಿಕೆಯಂತೆ ಬಂಟ್ವಾಳ ತಾಲೂಕಿನ ಆಯ್ದ ಕೆಲವು ಶಾಲೆಗಳಿಗೆ ಪೌಷ್ಠಿಕ ಆಹಾರದ ಕೊರತೆಯನ್ನು ನೀಗಿಸಿ ಶೈಕ್ಷಣಿಕ ಗುಣ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಉಪಾಹಾರದ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ ಎಂದರು .
ಕಡೇಶ್ವಾಲ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಹಾರ ಯೋಜನೆಗೆ ಎಲ್ಲಾ ಪೋಷಕರ ಪ್ರೋತ್ಸಾಹ ಸಹಕಾರ ಅಗತ್ಯವಾಗಿದ್ದು ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಸತ್ಯಸಾಯಿ ಸಮಿತಿ ಮಾಜಿ ಸಂಚಾಲಕ ತಿರುಮಲೇಶ್ವರ ಭಟ್, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿದ್ಯಾಧರ ರೈ, , ಶಿಕ್ಷಣ ಸಂಯೋಜಕಿ ಪುಷ್ಪ, ಶಾಲಾಭವೃದ್ದಿ ಸಮಿತಿ ಅಧ್ಯಕ್ಷ ರಾಮಕೃಷ್ಣ ರಾವ್ ನೆಕ್ಕಿಲಾಡಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಭಟ್, ಗ್ರಾ.ಪಂ ಉಪಾಧ್ಯಕ್ಷ ಸುರೇಂದ್ರ ರಾವ್ ನೆಕ್ಕಿಲಾಡಿ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಉಮಾವತಿ ಎನ್. ಸ್ವಾಗತಿಸಿ ಶಿಕ್ಷಕ ಶಿವರಾಮ ಭಟ್ ನಿರೂಪಿಸಿದರು.ಶಿಕ್ಷಕಿ ಭವಾನಿ ಗಿರಿಯಪ್ಪ ಗೌಡ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದು ದೇವರ ಸೇವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*