ಉಳಿ ಗ್ರಾಮದ ಕಕ್ಯ ನಿವಾಸಿ, ಬಿಜೆಪಿ ಪ್ರಮುಖ ಹರೀಶ್ ಕುಮಾರ್ ಕಕ್ಯ(46) ಅಸೌಖ್ಯದಿಂದ ಸ್ವಗೃಹದಲ್ಲಿ ನ.15ರಂದು ನಿಧನ ಹೊಂದಿದರು.
ಪತ್ನಿ, ಇಬ್ಬರು ಪುತ್ರರನ್ನು ಅವರು ಅಗಲಿದ್ದಾರೆ. ಬಿಜೆಪಿ ಸರಪಾಡಿ ಶಕ್ತಿ ಕೇಂದ್ರದ ಉಪಾಧ್ಯಕ್ಷರಾಗಿದ್ದರು. ಶ್ರೀ ಗುರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಕ್ಯಪದವು ಶಾಖೆಯ ಸಲಹೆಗಾರರಾಗಿ, ಹಿಂದೂ ಜಾಗರಣ ವೇದಿಕೆ ಕಕ್ಯಪದವು ಶಾಖೆಯ ಗೌರವ ಸಲಹೆಗಾರರಾಗಿ, ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿದ್ದರು. ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾಗಿ, ಉಳಿ ಶಾಸಕರ ಮಾದರಿ ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಉಳಿಯುವಕ ಮಂಡಲದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು , ಸ್ಥಳೀಯವಾಗಿ ಜನಾನುರಾಗಿಯಾಗಿದ್ದರು. ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಸರಪಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಶಶಿಕಾಂತ ಶೆಟ್ಟಿ, ಎಪಿಎಂಸಿ ಸದಸ್ಯ ಹರೀಶ್ಚಂದ್ರ ಪೂಜಾರಿ ಮತ್ತಿತರರು ಮನೆಯವರಿಗೆ ಸಾಂತ್ವನ ಹೇಳಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)