ವಿಟ್ಲಕಸಬಾ ಗ್ರಾಮದ ರಾಯರಬೆಟ್ಟು ನಿವಾಸಿ, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೋರ್ವ ಶುಕ್ರವಾರ ಸಾವನ್ನಪ್ಪಿದ್ದಾರೆ.
ರಾಯರಬೆಟ್ಟು ರುಕ್ಮ ಪೂಜಾರಿ ಅವರ ಪುತ್ರ ರಜತ್‌ರಾಜ್(27) ಅವರು ಮೃತಪಟ್ಟ ಯುವಕ. ಈತ ಕಳೆದ ಒಂದೂವರೆ ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಗುರುವಾರ ಮತ್ತೆ ಅನಾರೋಗ್ಯ ಕಾಡಿದೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ 108ರಲ್ಲಿ ಕರೆದೊಯ್ದು ದಾಖಲಿಸಲಾಗಿತ್ತು.
ಆದರೆ ಅದಕ್ಕೆ ಸಂಬಂಧಪಟ್ಟ ಚಿಕಿತ್ಸೆ ವ್ಯವಸ್ಥೆ ಇಲ್ಲವೆಂದು ಅಲ್ಲಿನ ವೈದ್ಯರು ತಿಳಿಸಿದ್ದರು. ರಾತ್ರಿ ತೀವ್ರ ಅನಾರೋಗ್ಯ ಕಾಡಿದಾಗ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ನೀಡಿದರೂ ಶುಕ್ರವಾರ ಬೆಳಗ್ಗೆ ಗಂಟೆ 10.50 ಕ್ಕೆ ಮೃತಪಟ್ಟರು. ರಜತ್‌ರಾಜ್ ಅವಿವಾಹಿತನಾಗಿದ್ದು, ತಂದೆ, ತಾಯಿ ಮತ್ತು ಹಿರಿಯ ಸಹೋದರನನ್ನು ಅಗಲಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…