ಅ. 26ರಂದು ರಾತ್ರಿ ಫರಂಗಿಪೇಟೆಯಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಡಿಸಿಐಬಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮುಹಮ್ಮದ್ ಹುಸೈನ್ ಯಾನೆ ಮುನ್ನಾ (26), ನೌಫಾಲ್ ಯಾನೆ ಟೊಪ್ಪಿ ನೌಫಾಲ್ (25), ಮುಹಮ್ಮದ್ ಆಶಿಫ್ ಯಾನೆ ಮೂಸಾ ಅಚ್ಚಿ(27), ಇಬ್ರಾಹಿಂ ಯಾನೆ ದೊಡ್ಡ ಪುತ್ತಾ(29) ಬಂಧಿತ ಆರೋಪಿಗಳು.
ಅ. 26ರಂದು ರಾತ್ರಿ ಫರಂಗಿಪೇಟೆಯ ಪೊಲೀಸ್ ಔಟ್‌ಪೋಸ್ಟ್ ಬಳಿ ನಡೆದ ಗ್ಯಾಂಗ್‌ವಾರ್‌ಗೆ ಝಿಯಾದ್ ಮತ್ತು ಫಯಾಝ್ ಎಂಬವರು ಕೊಲೆಗೀಡಾಗಿದ್ದರು. ಕ್ವಾಲಿಸ್ ಹಾಗೂ ಟೆಂಪೊದಲ್ಲಿ ಬಂದಿದ್ದ ಹಂತಕರು ತಲವಾರು ದಾಳಿ ನಡೆಸಿದ್ದರು. ಈ ಘಟನೆಯಿಂದ ಅನೀಸ್, ಫೈಝಲ್ ಮತ್ತು ಮುಷ್ತಾಕ್ ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಡುಪಿಯಲ್ಲಿ ಶುಕ್ರವಾರ ಡಿಸಿಐಬಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ತಲೆಮರೆಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಬಂಟ್ವಾಳ ನಗರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಡಿಸಿಐಬಿ ಇನ್‌ಸ್ಪೆಕ್ಟರ್ ಅಮಾನುಲ್ಲ, ಪುತ್ತೂರು ಟ್ರಾಫಿಕ್ ಎಸ್ಸೈ ಜಗದೀಶ್ ರೆಡ್ಡಿ, ಬಂಟ್ವಾಳ ಟ್ರಾಫಿಕ್ ಎಸ್ಸೈ ಯಲ್ಲಪ್ಪ, ಸಿಬ್ಬಂದಿಗಳಾದ ಸಂಜೀವ ಪುರುಷ, ಉದಯ ರೈ, ಲಕ್ಷಣ, ಇಕ್ಬಾಲ್, ಪ್ರವೀಣ್, ತಾರನಾಥ, ಪಳನಿ, ವಾಸುನಾಯ್ಕ, ಚಾಲಕ ವಿಜಯ ಗೌಡ, ವಾಸು ನಾಯ್ಕ ಬಂಟ್ವಾಳ ಅವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.