ಕಾರೊಂದು ನಿಯಂತ್ರಣ ತಪ್ಪಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು, ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ, ಚಾಲಕ ನೆಟ್ಲಮುಡ್ನೂರು ಬಾಬನಕಟ್ಟೆ ನಿವಾಸಿ ರಾಕೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

pic: Kishore Peraje



ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ನೇರಳಕಟ್ಟೆ ವ್ಯವಸಾಯಿ ಸೇವಾ ಸಹಕಾರಿ ಬ್ಯಾಂಕ್ ಉದ್ಯೋಗಿಯಾಗಿರುವ ರಾಕೇಶ್, ಕಚೇರಿ ಕೆಲಸಕ್ಕೆಂದು ತನ್ನ ಕಾರಿನಲ್ಲಿ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದ ಸಂದರ್ಭ ಈ ಅನಾಹುತ ಸಂಭವಿಸಿದೆ.
ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.
ಘಟನೆ ಹೇಗಾಯಿತು?
ಮಧ್ಯಾಹ್ನ ವೇಳೆ ತನ್ನ ಕಾರಿನಲ್ಲಿ ಬರುತ್ತಿದ್ದ ರಾಕೇಶ ನಿಯಂತ್ರಣ ತಪ್ಪಿ, ಎದುರಿನಿಂದ ಸಂಚರಿಸುತ್ತಿದ್ದ ಕಾರು, ಆಟೊಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂದರ್ಭ ರಸ್ತೆ ಬದಿಯಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಪಕ್ಕದ ಗದ್ದೆಗೆ ಉರುಳಿದೆ. ತೀವ್ರ ರಕ್ತಸ್ರಾವದಿಂದ ರಾಕೇಶ್ ಬಿದ್ದಿದ್ದರು. ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಕ್ರಮ ಕೈಗೊಂಡಿದ್ದಾರೆ. ಇದೇ ದಾರಿಲ್ಲಿ ತೆರಳುತ್ತಿದ್ದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರೂ ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಗಂಭೀರ ಗಾಯಗೊಂಡ ರಾಕೇಶ್ ಮೃತಪಟ್ಟಿರುವುದಾಗಿ ಬಂಟ್ವಾಳ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.


Be the first to comment on "ನಿಯಂತ್ರಣ ತಪ್ಪಿದ ಕಾರು: ಚಾಲಕ ಸಾವು"