ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಸಿಬ್ಬಂದಿ ನೀಡುತ್ತಿಲ್ಲ. ಇಂಟರ್ ನೆಟ್ ಸಮಸ್ಯೆ ಎಂಬ ಕಾರಣವನ್ನು ನೀಡುತ್ತಿದ್ದಾರೆ ಎಂದು ಗ್ರಾಹಕರು ಆರೋಪಿಸಿ ಅಂಗಡಿ ಮುಂದೆ ಜಮಾಯಿಸಿದ ಘಟನೆ ಸೋಮವಾರ ನಡೆದಿದೆ. ಸ್ಥಳಕ್ಕೆ ಮಂಗಳೂರಿನ ಆಹಾರ ಮತ್ತು ನಾಗರಿಕ ಸರಬರಾಜು ಉಪನಿರ್ದೇಶಕರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.