ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಸಹಕಾರಿ ಎಂದು ಶ್ರೀ ವೆಂಕಟರಮಣ ಸ್ವಾಮೀ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಸುಂದರ ಮೊಯ್ಲಿ ಹೇಳಿದರು.
ಶ್ರೀ ವೆಂಕಟರಮಣ ಸ್ವಾಮೀ ಪದವಿ ಪರ್ವ ಕಾಲೇಜಿನಲ್ಲಿ ನಡೆದ 2017-18ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
2016-17ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರೋನಾಲ್ಡ್ ಡಿಸೋಜ ಮಾತನಾಡಿ, ವಿದ್ಯಾರ್ಥಿಯ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜತೆ ರಕ್ಷಕರ ಸಲಹೆ ಸೂಚನೆ ಅತ್ಯಾಮೂಲ್ಯವಾದುದು ಎಂದು ಹೇಳಿದರು.
ಎಸ್.ವಿ.ಎಸ್. ಪ.ಪೂ. ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಯಲ್ಲಿ ಆತ್ಮವಿಶ್ವಾಸ ತುಂಬಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಪಷಕ ಮತ್ತು ಶಿಕ್ಷಕರ ಜವಾಬ್ದಾರಿ ಮಹತ್ತರವಾದುದು ಎಂದು ಹೇಳಿದರು.
ರಕ್ಷಕ-ಶಿಕ್ಷಕ ಸಂಘದ ಕೋಶಾಧಿಕಾರಿ ಕೃಷ್ಣ ನಾಯಕ್ ಬಿ. ವಾರ್ಷಿಕ ಲೆಕ್ಕ ಪತ್ರ ಮಂಡನೆ ಮಾಡಿದರು.
ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು. ರಕ್ಷಕ-ಶಿಕ್ಷಕ ಸಂಘದ ನೂತನ ಕಾರ್ಯಕಾರಿಣಿ ಸಮಿತಿಯ ಅಧ್ಯಕ್ಷರಾಗಿ ವೇದಾನಂದ ಕಾರಂತ್ ಮತ್ತು ಕೋಶಾಧಿಕಾರಿ ಕೃಷ್ಣ ನಾಯಕ್ ಬಿ. ಆಯ್ಕೆಯಾದರು.
ಎಸ್.ವಿ.ಎಸ್. ಪ.ಪೂ. ಕಾಲೇಜು ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಹಾಗೂ ಗಣತಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.
ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪದವಿ ಪರ್ವ ಶಿಕ್ಷಣ ಇಲಾಖೆ ನಡೆಸಿದ 2016-17ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಾಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ನಗದು ಬಹುಮಾನಗಳೊಂದಿಗೆ ಸಮ್ಮಾನಿಸಲಾಯಿತು.
ವಿದ್ಯಾರ್ಥಿ ಅನನ್ಯ ಜಿ. ಮತ್ತು ಮಾನಸ ಪ್ರಾರ್ಥಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಸ್ಮಿತಾ ಎ. ಅತಿಥಿ ಪರಿಚಯಿಸಿದರು. ಅತ್ಯಾಧಿಕ ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ರಕ್ಷಾ ಜೈನ್ ಮತ್ತು ರಿಚಾ ಶಿಫಾಲಿ ಡಿ’ಸೋಜ ಅನಿಸಿಕೆ ವ್ಯಕ್ತಪಡಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶಾಲಿನಿ ಬಿ. ಪರಸ್ಕೃತ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಭಾರತಿ ಪಿ. ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಕವಿತಾ ವಂದಿಸಿ, ಕನ್ನಡ ಉಪನ್ಯಾಸಕ ಚೇತನ್ ಎಂ. ಕಾರ್ಯಕ್ರಮ ನಿರೂಪಿಸಿದರು.
Be the first to comment on "ಎಸ್.ವಿ.ಎಸ್.ಪ.ಪೂ.ಕಾಲೇಜು: ಪಿಟಿಎ ಮಹಾಸಭೆ"