ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳದಲ್ಲಿ ಸುಮಾರು 41 ವರ್ಷಗಳ ಕಾಲ ಕಚೇರಿಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದ ಕೆ. ಸುರೇಂದ್ರ ಕಾಮತ್ (65 ಹೃದಯಘಾತದಿಂದ ಮಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ಕಾಲೇಜಿನ ಎಲ್ಲಾ ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಶಿಕ್ಷಕೇತರ ಸಂಘದ ಜೊತೆಕಾರ್ಯದರ್ಶಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಅಗಲಿದ ಸುರೇಂದ್ರ ಅವರ ನೆನಪಿಗೆ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.