ಬಂಟ್ವಾಳ

ಲಯನ್ಸ್ ನಿಂದ ನಿರ್ಮಲ ಹೃದಯದಲ್ಲೊಂದು ದಿನ


ಲಯನ್ಸ್ ಕ್ಲಬ್ ಹಾಗೂ ಲಯನೆಸ್ ಕ್ಲಬ್ ಬಂಟ್ವಾಳ ಹಾಗೂ ಲಯನ್ಸ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ನಿರ್ಮಲ ಹೃದಯದಲ್ಲೊಂದು ದಿನ ಎನ್ನುವ ವಿಶೇಷ ಕಾರ್ಯಕ್ರಮ ಬುಧವಾರ ನಡೆಯಿತು.

ಲಯನ್ಸ್ ಕ್ಲಬ್‌ನ ಫಿಸಿಯೋಥೆರಪಿ ಕೇಂದ್ರದ ಮಕ್ಕಳೊಂದಿಗೆ ಬೆರೆಯುವ ಈ ವಿಶೇಷ ಕಾರ್ಯಕ್ರಮವನ್ನು ಕ್ಲಬ್‌ನ ಸ್ಥಾಪಕಾಧ್ಯಕ್ಷ ಡಾ ವಸಂತ ಬಾಳಿಗ ಉದ್ಘಾಟಿಸಿದರು.

ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ವಸಂತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಏಳು ವರ್ಷಗಳ ಹಿಂದೆ ಈ ಕಾರ್ಯಕ್ರಮವನ್ನು ಆಯೋಜಿಸುವಾಗ ಇಷ್ಟು ವಿಶಿಷ್ಟವಾಗಿ ಮೂಡಿ ಬರುತ್ತದೆ ಎನ್ನುವ ನಿರೀಕ್ಷೆ ಇರಲಿಲ್ಲ. ಆದರೆ ಲಯನ್ಸ್ ಕ್ಲಬ್‌ನ ದಾಮೋದರ್ ಬಿ.ಎಂ. ಹಾಗೂ ದೇವಿಕ ಅವರ ಮುತುವರ್ಜಿಯಿಂದ ಈ ಕಾರ್ಯಕ್ರಮ ಯಶಸ್ಸನ್ನು ಕಂಡಿದೆ ಎಂದರು.

ಜಾಹೀರಾತು

ಲಯನ್ಸ್ ಕ್ಲಬ್‌ನ ಪ್ರಮುಖರಾದ ನವನೀತ್ ಶೆಟ್ಟಿ ಕದ್ರಿ, ಸೇಸಪ್ಪ ಕೋಟ್ಯಾನ್, ಅಧ್ಯಕ್ಷ ಜಗದೀಶ ಎಡಪಡಿತ್ತಾಯ ಮತ್ತಿತರ ಪ್ರಮುಖರು ಹಾಜರಿದ್ದರು. ಈ ಸಂದರ್ಭ ದಾಮೋದರ್ ಹಾಗೂ ಫಿಸಿಯೋ ಥೆರಪಿ ಕೇಂದ್ರದ ವಿದ್ಯಾರ್ಥಿನಿ ಜನ್ಮದಿನವನ್ನು ಆಚರಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts