ವಿಟ್ಲ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ-ಶ್ರೀ ಗುರುದೇವ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ

www.bantwalnews.com

ಜಾಹೀರಾತು

ಯಾಂತ್ರಿಕವಾಗಿ ಮುಂದುವರಿಯುತ್ತಿರುವಾಗ ಮಕ್ಕಳನ್ನು ದಾರಿ ತಪ್ಪಿಸುವ ಯಂತ್ರಗಳಿಗೆ ಕಡಿವಾಣ ಹಾಕಬೇಕು. ತಂತ್ರಜ್ಞಾನದ ಜೊತೆಗೆ ತತ್ತ್ವಜ್ಞಾನದ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಅಧ್ಯಾತ್ಮದ ಶಿಕ್ಷಣಕ್ಕೆ ನಾವೆಲ್ಲರೂ ಮನ ಮಾಡಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭೆಯಲ್ಲಿ ’ಗುರುದೇವ’ ಚಿಣ್ಣರ ಚಿಲುಮೆ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದೀಪಬೆಳಗಿಸಿ ಉದ್ಘಾಟಿಸಿದ ಸಾಧ್ವಿ ಶ್ರೀ ಶ್ರೀ ಶ್ರೀಮಾತಾನಂದಮಯೀ ಈ ಸಂದರ್ಭ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣ ಭಟ್, ಹುಬ್ಬಳ್ಳಿ ಆಲ್ಫಾ ಲೈಫ್ ಕೇರ್‌ನ ಕಾರ್ಯನಿರ್ವಹಣಾಧಿಕಾರಿ ಪಟ್ಲ ದಾಮೋದರ ಶೆಟ್ಟಿ, ಕರೋಪಾಡಿ ಗ್ರಾಮ ಪಂಚಾಯತ್ ಸದಸ್ಯ ಅಶ್ವತ್ ಶೆಟ್ಟಿ ಅನೆಯಾಲಮಂಟಮೆ, ಒಡಿಯೂರು ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಮಂಗಳೂರು ವಯಲದ ಅಧ್ಯಕ್ಷ ಜಯಂತ್ ಜೆ.ಕೋಟ್ಯಾನ್, ಒಡಿಯೂರು ಶ್ರೀ ಗುರುದೇವ ಐ.ಟಿ.ಐ.ನ ಪ್ರಾಂಶುಪಾಲ ಕರುಣಾಕರ್, ನಿವೃತ್ತ ಮುಖ್ಯೋಪಾಧ್ಯಾಯರಾದ ಅಮೈ ಕೃಷ್ಣ ಭಟ್ ಪಾಲ್ಗೊಂಡಿದ್ದರು.

ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜೇತರ ಪಟ್ಟಿಯನ್ನು ಸಹಶಿಕ್ಷಕಿಯರಾದ ಶಿಲ್ಪಾ, ಪ್ರಮೀಳಾ ಕೆ.,  ಚೈತ್ರಾ, ಪವಿತ್ರಾ, ಪೂರ್ಣಿಮಾ,  ಸವಿತಾ, ಮಂಜುಳಾ ವೈ., ದೈಹಿಕ ಶಿಕ್ಷಕ ಉದಯಕುಮಾರ್ ರೈ ವಾಚಿಸಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ್ ಶೆಟ್ಟಿ ವರದಿ ವಾಚಿಸಿದರು.

ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ  ನವಿತಾ ಬಿ.ಆರ್. ಧನ್ಯವಾದವಿತ್ತರು. ಶಿಕ್ಷಕಿ ಅನಿತಾ ಎಸ್. ಕಾರ್ಯಕ್ರಮ ನಿರೂಪಿಸಿದರು. ಗುರುಕುಲ ಮತ್ತು ಪ್ರಾಥಮಿಕ ಶಾಲಾ ಪುಟಾಣಿಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಿತು. ಸಭೆಯ ಬಳಿಕ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.