ಜಿಲ್ಲಾ ಸುದ್ದಿ

ಡಿ.22ರಿಂದ ಕರಾವಳಿ ಉತ್ಸವ

www.bantwalnews.com

Meeting

ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳು ಮಾತನಾಡಿ,ಇಲ್ಲಿನ ಜನತೆಯ ಉತ್ಸವವಾಗಿ ಮಾರ್ಪಾಡಬೇಕು. ಸ್ಥಳೀಯರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.
ಕರಾವಳಿ ಉತ್ಸವ ಡಿ.22ರಿಂದ ಆರಂಭವಾಗಲಿದ್ದು, ಅಂದು ನೆಹರು ಮೈದಾನದಿಂದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ವಿವಿಧ ಕಲೆ, ಸಂಸ್ಕೃತಿ ಹಾಗೂ ಜನಪದ ವೈಭವಗಳನ್ನು ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ ಸಂಚರಿಸಲಿದೆ. ಬಳಿಕ ಕರಾವಳಿ ಉತ್ಸವ ಉದ್ಘಾಟನೆಯಾಗಲಿದೆ. ಈ ವರ್ಷ ಲಾಲ್‍ಬಾಗ್ ಹಾಗೂ ಕದ್ರಿ ಪಾರ್ಕ್ ಎರಡೂ ಕಡೆ ಎಲ್ಲಾ 10 ದಿನಗಳಲ್ಲೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಮತ್ತು ಕಲಾ ಪ್ರಕಾರಗಳಿಗೆ ಆದ್ಯತೆ ನೀಡಲಾಗಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಕಾರ್ಯಕ್ರಮಗಳು ನಡೆಯಲಿವೆ. ನಾಗರೀಕರ ಅಭಿರುಚಿಗೆ ತಕ್ಕಂತೆ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಡಾ. ಸಸಿಕುಮಾರ್ ಸೆಂಥಿಲ್ ತಿಳಿಸಿದರು.
ಕೊನೆಯ ಮೂರು ದಿನಗಳಲ್ಲಿ ಪಣಂಬೂರು ಬೀಚ್‍ನಲ್ಲಿ ಬೀಚ್ ಉತ್ಸವ ಏರ್ಪಡಿಸಲಾಗಿದೆ. ಇಲ್ಲಿ ಆಕರ್ಷಕ ಕಲಾ ಕಾರ್ಯಕ್ರಮಗಳು ನಡೆಯಲಿವೆ. ಕರಾವಳಿ ಉತ್ಸವ ಸಮಾರೋಪ ಡಿಸೆಂಬರ್ 31ರಂದು ಪಣಂಬೂರು ಬೀಚ್‍ನಲ್ಲಿಯೇ ನಡೆಯಲಿದೆ. ಕರಾವಳಿ ಉತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಉಪಸಮಿತಿಗಳು ಯೋಜನೆ ಹಾಕಿಕೊಳ್ಳು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಅಪರ ಜಿಲ್ಲಾಧಿಕಾರಿ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ವಿವಿಧ ಇಲಾಖಾಧಿಕಾರಿಗಳು, ಉಪಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ