ಚಿತ್ರ : SR bcroad
ಚಿತ್ರ : SR bcroad
ಸಾರ್ವಜನಿಕ ವಿತರಣೆಗೆಂದು ಮೀಸಲಿರಿಸಲಾಗಿದ್ದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ಪೊಲೀಸರು ಮತ್ತು ಆಹಾರ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಬಿ.ಸಿ.ರೋಡಿನ ಶಾಂತಿಯಂಗಡಿ ಸಮೀಪ ವಶಪಡಿಸಿಕೊಂಡಿದ್ದಾರೆ.
ಎಎಸ್ಪಿ ಡಾ.ಅರುಣ್ ನೇತೃತ್ವದಲ್ಲಿ ಪೊಲೀಸ್ ತಂಡ ಈ ದಾಳಿಯನ್ನು ನಡೆಸಿದ್ದು, ಹಾಸನದಿಂದ ಕೇರಳ ಕಡೆಗೆ ಅಕ್ರಮವಾಗಿ ಅಕ್ಕಿಯನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಈ ಸಂಬಂಧ ಮೂರು ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 200 ಬ್ಯಾಗುಗಳಲ್ಲಿ 100 ಕ್ವಿಂಟಲ್ ಅಕ್ಕಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)