ಏಳುವರ್ಷದ ಬಾಲಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ಉಮಾಶಿವ ಕ್ಷೇತ್ರ ದೇವಳದ ಸಮೀಪ ನಡೆದಿದೆ.
ನೇರಳಕಟ್ಟೆ ಭಗವತಿಕೋಡಿ ನಿವಾಸಿ, ಮಂಗಳೂರಿನ ಖಾಸಗಿ ವಿದ್ಯಾಸಂಸ್ಥೆಯ ಶಿಕ್ಷಕ ಸತ್ಯನಾರಾಯಣ ಎಂಬವರ ಪುತ್ರ ಶ್ರೀರಾಮ್(7) ಮೃತ ಬಾಲಕ.
ಉಮಾಶಿವ ಕ್ಷೇತ್ರದ ಸಭಾಂಗಣದಲ್ಲಿ ತನ್ನ ಅಜ್ಜನ ಶ್ರಾದ್ದಕ್ಕೆಂದು ಶ್ರೀರಾಮ್ ತನ್ನ ಮನೆಯವರ ಜೊತೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ.
ಆಟವಾಡಲು ತನ್ನ ಸ್ನೇಹಿತನ ಜೊತೆ ಕ್ಷೇತ್ರದ ಕೆರೆಯ ಬಳಿಗೆ ತೆರಳಿದ್ದ ಈತ ಹಠಾತ್ತನೆ ಆಯತಪ್ಪಿ ಬಿದ್ದಿದ್ದಾನೆ. ಇದೇ ವೇಳೆ ಸ್ನೇಹಿತ ಓಡಿ ಬಂದು ಶ್ರೀರಾಮ್ ಕೆರೆಗೆ ಬಿದ್ದಿರುವ ವಿಚಾರ ತಿಳಿಸಿದ್ದಾನೆ. ತಕ್ಷಣ ಅಲ್ಲಿದ್ದವರು ಆತನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾನೆ.
ಶ್ರೀರಾಮ್ , ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ 2ನೇ ತರಗತಿ ಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.
ಘಟನೆ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)