ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ರೇಶ್ಮೆ ರೋಡ್ ಎಂಬಲ್ಲಿ ಯುವಕನೋರ್ವಹ ಹತ್ಯೆಯಾಗಿದೆ. ಗುರುವಾಯನಕೆರೆ ನಿವಾಸಿ ಪ್ರದೀಪ ( 38 ) ಮೃತಪಟ್ಟ ಯುವಕ.
ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪ್ರದೀಪ್ ಮೇಲೆ ಜಾಕ್ ಲಿವರ್ ನಿಂದ ಹಲ್ಲೆ ಮಾಡಲಾಗಿದೆ. ನಿರ್ಮಾಣ ಕಂಪನಿಯಲ್ಲಿ ಚಾಲಕನಾಗಿ ದುಡಿಯುತ್ತಿರುವ ಪ್ರದೀಪ್ ಅವರನ್ನು ಕೂಡಲೇ ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಸಾವನ್ನಪ್ಪಿರುವುದಾಗಿ ಮಾಹಿತಿ ನೀಡಲಾಯಿತು. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)