ಕಲ್ಲಡ್ಕ

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ

ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ವತಿಯಿಂದ ಪ್ರತಿಭೋತ್ಸವ ಹಾಗೂ ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ ಡಿಸೆಂಬರ್ 3 ಆದಿತ್ಯವಾರ ಮಿತ್ತೂರು ಸಮೀಪದ ಪಾಟ್ರಕೋಡಿ ಎಂಬಲ್ಲಿ ನಡೆಯಲಿರುವುದು.

ಅಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿರುವ ಕಾರ್ಯಕ್ರಮ ಸಂಜೆ 6 ಗಂಟೆಗೆ ಸಮಾರೋಪಗೊಳ್ಳಲಿದೆ,ಆಕರ್ಷಕ ರ್ಯಾಲಿಯೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಂಝ ಹಾದಿ ತಂಙಳ್ ಪಾಟ್ರಕೋಡಿ ಧ್ವಜಾರೋಹಣಗೈಯ್ಯಲಿದ್ದಾರೆ.

ಜಾಹೀರಾತು

ಉದ್ಘಾಟನೆಯನ್ನು ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ದಾರುಲ್ ಇರ್ಶಾದ್ ಶಿಲ್ಪಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ನೆರವೇರಿಸಲಿದ್ದಾರೆ,ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ನಚ್ಚಬೊಟ್ಟು ಪ್ರೊಫೆಸರ್ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಪ್ರಾಸ್ತಾವಿಕ ಭಾಷಣ ಮಾಡಲಿರುವರು,ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿ ಎಂ ಮುಹಮ್ಮದ್ ಕಾಮಿಲ್ ಸಖಾಫಿ ವಹಿಸಲಿದ್ದು,ಪ್ರಾಸ್ತಾವಿಕ ಭಾಷಣವನ್ನು ಸುಲೈಮಾನ್ ಸಅದಿ ಪಾಟ್ರಕೋಡಿ,ಮುಖ್ಯ ಪ್ರಭಾಷಣವನ್ನು ಸಿರಾಜುದ್ದೀನ್ ಸಖಾಫಿ ಕನ್ಯಾನ ಮಾಡಲಿದ್ದಾರೆ.

ಇನ್ನಿತರ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ಮಾಣಿ ಸೆಕ್ಟರಿನ ಹನ್ನೊಂದು ಶಾಖೆಗಳಿಂದ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಲೀಂ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ