ಪುಂಜಾಲಕಟ್ಟೆ

ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಅವಿಭಜಿತ ಜಿಲ್ಲೆಯಲ್ಲಿ ಗ್ರಾಮೀಣ ಕೃಷಿಕರು ಜಾನಪದ ಕ್ರೀಡೆಯಾಗಿ ಬಳಸಿಕೊಂಡು ಬಂದಿರುವ ಕಂಬಳ ಕೀಡೆಯು ಪ್ರಸಕ್ತ ಜಗತ್ತಿನೆಲ್ಲೆಡೆ ಜನರು ಕುತೂಹಲದಿಂದ ನೋಡುವಂತಹ ಆಕರ್ಷಕ ಕ್ರೀಡೆಯಾಗಿ ರೂಪುಗೊಂಡಿದೆ. ಇಂತಹ ರೈತರ ಕ್ರೀಡೆಯನ್ನು ಉಳಿಸಿ ಮುಂದುವರಿಸಲು ಎಲ್ಲರೂ ಸಂಘಟಿತ ಶ್ರಮ ವಹಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ತಾಲೂಕಿನ ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ರಾತ್ರಿ ನಡೆದ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ರಾಜಾಶ್ರಯದಿಂದ ಜನಾಶ್ರಯ ಮೂಲಕ ಬೆಳೆದು ಬಂದಿರುವ ಕೃಷಿಕರ ನೆಚ್ಚಿನ ಗ್ರಾಮೀಣ ಕ್ರೀಡೆ ಕಂಬಳ ಉಳಿಸುವ ನಿಟ್ಟಿನಲ್ಲಿ ಸಕರ್ಾರ ಕೂಡಾ ಸುಗ್ರೀವಾಜ್ಞೆ ಮೂಲಕ ಸ್ಪಂದಿಸಿದೆ ಎಂದರು.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಿಲ್ಲಾ ಕಂಬಳ ಸಮಿತಿ ಗೌರವ ಸಲಹೆಗಾರ ಗುಣಪಾಲ ಕಡಂಬ, ಮಾಜಿ ಅಧ್ಯಕ್ಷ ಬೆಳುವಾಯಿ ಸದಾನಂದ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ವಿಜಯ ಕುಮಾರ್ ಕಂಗಿನ ಮನೆ, ಮೂಡುಬಿದ್ರೆ ಪುರಸಭೆ ಮಾಜಿ ಅಧ್ಯಕ್ಷ ರತ್ನಾಕರ ದೇವಾಡಿಗ, ಮೂಡ ಅಧ್ಯಕ್ಷ ಸುರೇಶ ಪ್ರಭು, ಐಪಿಎಲ್ ಆಟಗಾರ ಕೆ.ಸಿ.ಕಾರ್ಯಪ್ಪ, ಪ್ರೊ. ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ಅಂತರ್ ರಾಷ್ಟ್ರೀಯ ಕೀಡಾಪಟು ರೋಹಿತ್ ಕುಮಾರ್ ಕಟೀಲು, ಕಿರುತೆರೆ ನಟ ದಿಲೀಪ್ ಶೆಟ್ಟಿ, ಎಪಿಎಂಸಿ ಸದಸ್ಯ ಎಂ.ಪದ್ಮರಾಜ ಬಲ್ಲಾಳ್, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಲೊರೆಟ್ಟೊ ರೋಟರಿ ಕ್ಲಬ್ ಅಧ್ಯಕ್ಷ ಅವಿಲ್ ಮಿನೇಜಸ್, ಗವರ್ನರ್ ಪ್ರತಿನಿಧಿ ಎನ್.ಪ್ರಕಾಶ ಕಾರಂತ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ತಾಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಆರಂಬೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಗುತ್ತಿಗೆದಾರ ಉದಯ ಕುಮಾರ್ ರಾವ್, ಬಿಜೆಪಿ ಮುಖಂಡರಾದ ಕೆ.ಪಿ.ಜಗದೀಶ ಅಧಿಕಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಹರೀಶ ಪೂಂಜ, ಟಿ.ರಂಜನ್ ಗೌಡ, ಜೋಯ್ಲಸ್ ಡಿಸೋಜ, ಬದ್ರಿನಾಥ್ ಕಾಮತ್, ಜೆಡಿಎಸ್ ಮುಖಂಡ ಅಶ್ವಿನ್ ಜೆ.ಪಿರೇರ, ಪ್ರಮುಖರಾದ ಜಗನ್ನಾಥ ಶೆಟ್ಟಿ ಚಾವಡಿಮನೆ, ಕೆ.ಮಹಾಬಲ ಆಳ್ವ, ಹೇಮಚಂದ್ರ ಗೌಡ, ನವೀನ್ಚಂದ್ರ ಶೆಟ್ಟಿ ಮತ್ತಿತರರು ಶುಭ ಹಾರೈಸಿದರು.

ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರಧಾನ ಕಾರ್ಯದಶರ್ಿ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಾರ್ಯದಶರ್ಿ ಸಂದೇಶ ಶೆಟ್ಟಿ ಪೊಡುಂಬ, ಕೋಶಾಧಿಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜೊತೆ ಕಾರ್ಯದಶರ್ಿ ಪುಷ್ಪರಾಜ ಜೈನ್ ನಡ್ಯೋಡಿ, ಪುಂಜಾಲಕಟ್ಟೆ ಠಾಣಾಧಿಕಾರಿ ರಾಮ ನಾಯ್ಕ್ಕ್ ಮತ್ತಿತರರು ಇದ್ದರು.

ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ವಂದಿಸಿದರು. ಸಮಿತಿ ಗೌರವ ಸಲಹೆಗಾರ ಸುರೇಶ ಶೆಟ್ಟಿ ಮತ್ತು ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts