ಬಂಟ್ವಾಳ

ಸಚಿವ ಬಿ. ರಮಾನಾಥ ರೈ ಪ್ರವಾಸ

www.bantwalnews.com

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ.
ನವೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಮೊಗರ್ನಾಡು ಚರ್ಚ್ ಇದರ ಸಮುದಾಯ ಭವನದ ಶಿಲಾನ್ಯಾಸ, 11 ಗಂಟೆಗೆ ಫ್ರೆಂಡ್ಸ್ ಆಲದಪದವು ಇದರ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ, ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ತೋಟಗಾರಿಕೆ ಕ್ಷೇತ್ರದಲ್ಲಿ ಮದ್ದಡ್ಕ ಮಾದರಿ ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ, ಸಂಜೆ 4 ಗಂಟೆಗೆ ಸರಕಾರಿ ಪ್ರೌಢಶಾಲೆ ಕೊಯಿಲ ಇದರ ರಜತ ಮಹೋತ್ಸವದ ಸಮಾರೋಪ ಸಮಾರಂಭ, 5.30 ಕ್ಕೆ ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗುವ ಎಸ್.ವಿ.ಎಸ್ ಕಾಲೇಜು ಬಂಟ್ವಾಳ ಇದರ ಎನ್.ಎಸ್.ಎಸ್ ಶಿಬಿರದ ಉದ್ಘಾಟನಾ ಸಮಾರಂಭ.
ನವೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡ ಇದರ ಪ್ರತಿಭಾ ಪುರಸ್ಕಾರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮ, 11 ಗಂಟೆಗೆ ಕೊಳ್ನಾಡು ಗ್ರಾಮದ ಅಂಗನವಾಡಿ ಕೇಂದ್ರಗಳ ಕಟ್ಟಡದ ಉದ್ಘಾಟನೆ ಹಾಗೂ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 3 ಗಂಟೆಗೆ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಬರಿಮಾರು ರಸ್ತೆ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ, 3.30 ಕ್ಕೆ ಬಾಳ್ತಿಲ ಗ್ರಾಮದ ಬಿ.ಆರ್.ನಗರ ಅಂಬೇಡ್ಕರ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts