ಬಂಟ್ವಾಳನ್ಯೂಸ್ ವರದಿ
ವಿಟ್ಲದ ದೇವಸ್ಥಾನ ಸಹಿತ ಹಲವು ಉತ್ಸವ ಸಮಾರಂಭಗಳಲ್ಲಿ ಪ್ರಮುಖ ಪಾಕಶಾಸ್ತ್ರಜ್ಞರಾಗಿ ಗುರುತಿಸಿಕೊಂಡಿದ್ದ ಸದಾಶಿವ ಭಟ್ ನಿಧನಹೊಂದಿದ್ದಾರೆ.
ಕೊಡಿಪ್ಪಾಡಿಯಲ್ಲಿ ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದರು. ವಿಟ್ಲಕಸಬಾ ಗ್ರಾಮದ ಜಠಾಧಾರಿ ಕೆರೆ ಬಳಿಯ ನಿವಾಸಿ ಸದಾಶಿವ ಭಟ್ (65) ಅವರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಶನಿವಾರ ರಾತ್ರಿ ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದ ಅವರನ್ನು ತತ್‌ಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಭಾನುವಾರ ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…