ವಿಟ್ಲ

ಮತ್ತೆ ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ

  • ಮಂಗಳಪದವಿನಲ್ಲಿ ಕಳವಿಗೆ ವಿಫಲ ಯತ್ನ

ಮಂಗಳವಾರ ಬೆಳಗ್ಗೆ ಮಂಗಳಪದವಿನಲ್ಲಿರುವ ಗಾಯತ್ರಿ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ವಿಟ್ಲ ಆಸುಪಾಸಿನಲ್ಲಿ ಕಳ್ಳರ ಇರವನ್ನು ಸಾಬೀತುಪಡಿಸಿದೆ. ಮತ್ತೆ ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ ಚಿಗಿತುಕೊಂಡಿರುವ ಅನುಮಾನ ಮೂಡಿಸಿದೆ.

ಜಾಹೀರಾತು

ಹಾಗೆ ನೋಡಿದರೆ, ಬಂಟ್ವಾಳ ತಾಲೂಕಿನಲ್ಲಿ ಕಳೆದ ಮೂರು ನಾಲ್ಕು ತಿಂಗಳ ಹಿಂದೆ ದೇವಸ್ಥಾನ, ಮನೆಗಳಿಗೆ ರಾತ್ರಿ ಹಗಲಿನ ತಾರತಮ್ಯ ಇಲ್ಲದೆ ಕಳ್ಳರು ನುಗ್ಗಿದ ಘಟನೆ ವರದಿಯಾಗಿತ್ತು. ಯಾವ ಪ್ರಕರಣದಲ್ಲೂ ಸ್ಪಷ್ಟ ಸುಳಿವು ಪೊಲೀಸರಿಗೆ ದೊರಕಿದ ಕುರಿತು ಮಾಹಿತಿ ನೀಡಿಲ್ಲ.

ಕಳೆದ ತಿಂಗಳು ಗಂಭೀರ ಪ್ರಕರಣಗಳು ನಡೆಯದೇ ಇದ್ದರೂ ಇದೀಗ ಮತ್ತೆ ಬ್ಯಾಂಕುಗಳು, ಅಂಗಡಿಗಳತ್ತ ಕಳ್ಳರ ಚಿತ್ತ ನೆಟ್ಟಿದೆ.

ಮಂಗಳಪದವು ಮುಖ್ಯ ಪೇಟೆಯಲ್ಲಿರುವ ಗಾಯತ್ರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿ ಇದರ ಮುಂಭಾಗದ ಶಟರ್ ಮುರಿದು ಒಳನುಗ್ಗಿದ ಕಳ್ಳರು ಫೈನಾನ್ಸ್ನೊಳಗಡೆ ಹಣಕ್ಕಾಗಿ ಜಾಲಾಡಿದ್ದಾರೆ. ಪ್ರಮುಖ ಲಾಕರ್ ಅನ್ನು ಮುರಿಯಲು ಯತ್ನಿಸಿದ್ದು, ಅದು ಸಾಧ್ಯವಾಗದ ಕಾರಣ ಬರಿಗೈಯಲ್ಲಿ ಹಿಂತಿರುಗಿದ್ದಾರೆ. ಕಚೇರಿ ಸಿಬ್ಬಂದಿಗಳು ಬೆಳಿಗ್ಗೆ ಬಂದಾಗ ಘಟನೆ ಬಗ್ಗೆ ಬೆಳಕಿಗೆ ಬಂದಿದೆ. ಬಳಿಕ ಅವರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್, ವಿಟ್ಲ ಎಸೈ ನಾಗಾರಾಜ್, ಶ್ವಾನದಳ ಹಾಗೂ ಬೆರಳಚ್ಚು ತಂಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ತಮ್ಮ ಕಚೇರಿಯಲ್ಲಿ ಯಾವುದೇ ಸಿಸಿ ಕ್ಯಾಮಾರ ಅಳವಡಿಸದ ಕಾರಣ ಹಾಗೂ ಮಂಗಳಪದವಿನ ಎಲ್ಲಿಯೂ ಸಿಸಿ ಕ್ಯಾಮಾರಗಳನ್ನು ಅಳವಡಿಸದ ಕಾರಣ ಕಳ್ಳರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago