ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.
ಸಿದ್ಧಕಟ್ಟೆ ಸರಕಾರಿ ಪದವಿ ಪರ್ವ ಕಾಲೇಜಿನಲ್ಲಿ ನಡೆದ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಯಾವುದೇ ಭೇದಭಾವವಿಲ್ಲದೆ ಒಂದೇ ಮನಸ್ಸಿನಿಂದ ಭಾಗವಹಿಸಿ ಶಿಬಿರದಲ್ಲಿ ಸಿಗುವ ಉನ್ನತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗುವುದಕ್ಕೆ ಪ್ರೇರಣೆಯಾಗುತ್ತದೆ ಎಂದು ಹೇಳಿದರು.
ಜಿ.ಪಂ. ಸದಸ್ಯ ಪದ್ಮಶೇಖರ ಜೈನ್, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರಶಾಂತಿ, ಬಂಟ್ವಾಳ ವಿಜಯಾ ಬ್ಯಾಂಕ್ ವ್ಯವಸ್ಥಾಪಕ ಬೇಬಿ ಕುಂದರ್, ಸಿದ್ಧಕಟ್ಟೆ ಸರಕಾರಿ ಪದವಿ ಪರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ ನಾಯ್ಕ, ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸೀತಾರಾಮ್ ಶೆಟ್ಟಿ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅರ್ಕಕೀರ್ತಿ ಇಂದ್ರ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಲೋಕಯ್ಯ ಗಾಡಿಪಲ್ಕೆ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಕವಿತಾ ವಿ. ಶೆಟ್ಟಿಗಾರ್, ಎನ್.ಎಸ್.ಎಸ್. ಘಟಕ ನಾಯಕರಾದ ಸುಮಂತ್ ಎಸ್. ಕೆ, ಕೀರ್ತನ್, ಪ್ರತೀಕ್ಷಾ ಮತ್ತು ಪಂಚಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹಶಿಬಿರಾಧಿಕಾರಿ ಪ್ರದೀಪ್ ಪೂಜಾರಿ, ಅನಿಲ್, ಉಲ್ಲೇಖ ಜೈನ್, ಸಂಗೀತ ಶಾನ್‌ಬೋಗ್ ಮತ್ತು ಸುಷ್ಮಾ ಮತ್ತಿತರರು ಸಹಕರಿಸಿದರು.
ಎನ್.ಎಸ್.ಎಸ್. ಶಿಬಿರಾರ್ಥಿ ರಕ್ಷಾ ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಕಿಟ್ಟು ರಾಮಕುಂಜ ಸ್ವಾಗತಿಸಿ, ಶಿಬಿರಾಧಿಕಾರಿ ಡಾ. ಮಂಜುನಾಥ ಉಡುಪ ವಂದಿಸಿದರು. ಶಿಬಿರಾರ್ಥಿ ಸುದರ್ಶನ್ ಡಿ. ಸುವರ್ಣ ಕಾರ್ಯಕ್ರಮ ನಿರೂಪಿಸಿದರು.