ಬಂಟ್ವಾಳ

ಸಂವಿಧಾನದ ಅರಿವು ವಿದ್ಯಾರ್ಥಿಗಳಿಗೆ ಅಗತ್ಯ: ಪ್ರತಿಭಾ ಡಿ.ಎಸ್.

ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿಸಂವಿಧಾನ ದಿನವನ್ನು ಆಚರಿಸಲಾಯಿತು.

ಜಾಹೀರಾತು

ಬಂಟ್ವಾಳದ ಸಿವಿಲ್ ಮುಖ್ಯ ನ್ಯಾಯಾಧೀಶೆ ಪ್ರತಿಭಾ ಡಿ ಎಸ್ ಮಾತನಾಡಿ ಎಲ್ಲಾ ಕಾನೂನುಗಳ ಮೂಲ ಸಂವಿಧಾನ. ಸಂವಿಧಾನದ ಬಗೆಗೆ ಪ್ರತಿಯೊಬ್ಬರೂ ಮಾಹಿತಿ ಪಡೆಯಬೇಕು ಎಂದು ಹೇಳಿದರು. ಬಂಟ್ವಾಳ ಬಾರ್ ಅಸೋಸಿಯೇಶನ್ ಅಧ್ಯಕ್ಷ ಶ್ರೀ ವೆಂಕಟರಮಣ ಶೆಣೈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು.

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಗಣೇಶ್ ಪೈ ಮಾತನಾಡಿ ಎಲ್ಲಾ ಕಾನೂನುಗಳು ಸಂವಿಧಾನದ ಚೌಕಟ್ಟಿನಲ್ಲಿ ನಿರೂಪಿತವಾಗಿದೆ. ವಿದ್ಯಾರ್ಥಿಗಳು ಇದರ ಅರಿವು ಹೊಂದಿರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಂವಿಧಾನದ ಕುರಿತು ಜ್ಞಾನ ಹಾಗೂ ಗೌರವವನ್ನು ಎಲ್ಲರೂ ಹೊಂದಬೇಕು ಎಂದರು.

ವಿದ್ಯಾರ್ಥಿಗಳು ನ್ಯಾಯಾಧೀಶರೊಂದಿಗೆ ಪ್ರಶ್ನೋತ್ತರದ ಸಂವಾದ ನಡೆಸಿದರು. ನ್ಯಾಯವಾದಿಗಳಾದ ರಾಜಾರಾಮ್ ನಾಯಕ್, ಶ್ರೀಧರ್ ಪೈ, ಆಶಾ ಪ್ರಸಾದ್ ರೈ, ದೀಪಕ್ ಕುಮಾರ್ ಜೈನ್, ಸಂಯೋಜಕ ದಾಸೇಗೌಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕಿ ಜೂಲಿ ಟಿ ಜೆ ಸ್ವಾಗತಿಸಿ ನಿರ್ವಹಿಸಿದರು. ನಮಿತಾಂಜಲಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ