ಕಲ್ಲಡ್ಕ

ಪರಿಸರ, ದೇಶ ಉಳಿಸಲು ಮಕ್ಕಳಿಗೆ ಉತ್ತಮ ಸಂಸ್ಕೃತಿ ಅಗತ್ಯ

ಕಾಲ ಕೆಟ್ಟು ಹೋಗಿದೆ ಎನ್ನುವುದು ಭ್ರಮೆ, ಕಾಲ ಕೆಡುವುದಿಲ್ಲ .ಕೆಡುವುದು ಸಮಾಜ ಮಾತ್ರ. ನಮ್ಮ ಸಂಸ್ಕೃತಿಗನುಗುಣವಾಗಿ ಮಕ್ಕಳನ್ನು ಬೆಳೆಸಬೇಕು. ನಮ್ಮ ಪರಿಸರ ಮತ್ತು ದೇಶವನ್ನು ಮರೆಯಬಾರದಾದರೆ ನಾವು ಮಕ್ಕಳಿಗೆ ಉತ್ತಮ ಸಂಸ್ಕೃತಿಯನ್ನು ಕಲಿಸಬೇಕು ಎಂದು ನಿವೃತ್ತ ತಹಸಿಲ್ದಾರ್ ಮಂಗಳೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮೋಹನ್ ರಾವ್  ಹೇಳಿದರು.

ಜಾಹೀರಾತು

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಅಧ್ಯಕ್ಷರಾಗಿ ಆಗಮಿಸಿದ ಮಾಣಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ ಮಾತನಾಡಿ ಮಕ್ಕಳ ಸುಪ್ತ ಪ್ರತಿಭೆ ಹೊರಹೊಮ್ಮಲು ಇಂತಹ ವೇದಿಕೆಗಳು ಅಗತ್ಯ. ಸಂಸ್ಕೃತಿ ಬೆಳೆಸುವಲ್ಲಿ ವಿದ್ಯಾಸಂಸ್ಥೆಗಳ ಪಾತ್ರ ಅಪಾರ ಎಂದರು. ಆಡಳಿತಾಧಿಕಾರಿ ಸಿ. ಶ್ರೀಧರ್ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಪ್ರತಿಭೆಯ ಪ್ರದರ್ಶನ, ಶಿಕ್ಷಣದ ಪ್ರಧಾನ ಅಂಗಗಳಲ್ಲಿ ಒಂದು ಎಂದರು.

ಡಿ.ಡಿ.ಪಿ.ಐ. ಕಚೇರಿಯ ವಿಷಯ ಪರಿವೀಕ್ಷಕರಾದ ಶಮಂತ್.ವಿ.ಎಮ್, ನಿವೃತ್ತ ಮುಖ್ಯೋಪಾಧ್ಯಾಯರಾದ ಸುರೇಶ್ ಶೆಟ್ಟಿ ,ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಬಿ.ಎಸ್. ನಾಯ್ಕ್, ಕಾರ್ಯದರ್ಶಿ ಕೊಂಬಿಲ ನಾರಾಯಣ ಶೆಟ್ಟಿ,ಉಪಾಧ್ಯಕ್ಷ ಅಪ್ರಾಯ ಪೈ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಲಕ್ಷ್ಮೀ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್.ಜೆ.ಶೆಟ್ಟಿ , ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ ಸಲ್ಡಾನ , ವಿದ್ಯಾರ್ಥಿ ನಾಯಕ ವೈಭವ್ ವಿ.ರಾವ್ ಉಪಸ್ಥಿತರಿದ್ದರು.

ಸಂಚಾಲಕರಾದ ಪ್ರಹ್ಲಾದ್ ಜೆ ಶೆಟ್ಟಿ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ ಶೆಟ್ಟಿ ವಂದಿಸಿದರು. ಸಹ ಶಿಕ್ಷಕಿಯರಾದ ಸುಧಾ ಎನ್.ರಾವ್ ಮತ್ತು ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ