ಯಕ್ಷಗಾನ

ಬಲಿಪ ನಾರಾಯಣ ಭಾಗವತರಿಗೆ ಪದ್ಯಾಣ ಪ್ರಶಸ್ತಿ

ತೆಂಕುತಿಟ್ಟು ಯಕ್ಷಗಾನದ ಮಹಾ ಭಾಗವತ ಬಲಿಪ ನಾರಾಯಣ ಭಾಗವತರಿಗೆ ಸಾಲಿನಪದ್ಯಾಣ ಪ್ರಶಸ್ತಿ ಘೋಷಣೆಯಾಗಿದೆ. ಸುಳ್ಯ ತಾಲೂಕು ಕಲ್ಮಡ್ಕದಪದ್ಯಾಣ ಪ್ರಶಸ್ತಿ ಸಮಿತಿಯ ಆಯೋಜನೆಯಲ್ಲಿ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ದಶಂಬರ 10, ರವಿವಾರದಂದು ಅಪರಾಹ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಪದ್ಯಾಣ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ವಹಿಸಲಿದ್ದಾರೆ. ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್(ರಿ) ಅಳಿಕೆ ಇದರ ಅಧ್ಯಕ್ಷ ಯು. ಗಂಗಾಧರ ಭಟ್, ಹಿರಿಯ ಅಥsದಾರಿ ಉಡುವೆಕೋಡಿ ಸುಬ್ಬಪ್ಪಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಲಾವಿದ ವಾಸುದೇವ ರಂಗಾಭಟ್ ಆಭಿನಂದನಾ ಭಾಷಣ ಮಾಡಲಿದ್ದಾರೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಕಳೆದ ವರುಷ ಸ್ಥಾಪಿಸಿದ ಮೊದಲ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರಿಗೆ ಪ್ರದಾನಿಸಲಾಗಿತ್ತು. ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿಕಲಾಕೃತಜ್ಞತೆ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ವರುಷ ಬಲಿಪ ನಾರಾಯಣ ಭಾಗವತರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕೆ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಇಂದಿನ ಯಕ್ಷಗಾನ ರಂಗದಲ್ಲಿ ಸರ್ವಾನುಮತ ಮತ್ತು ಶ್ರೇಷ್ಠತೆ ಎರಡನ್ನೂ ಹೊಂದಿದ ಬೆರಳೆಣಿಕೆಯ ಸಾಧಕರಲ್ಲಿ ಪ್ರಾಯಃ ಬಲಿಪ ನಾರಾಯಣ ಭಾಗವತರು ಮೂರ್ಧನ್ಯರು. ದೇಶದ ಪ್ರಾಚೀನ ರಂಗಭೂಮಿಯ ಅಗ್ರಪಂಕ್ತಿಯಲ್ಲಿ ಬಲಿಪರು ಸ್ಥಾನ ಪಡೆದವರು. ಎಂಭತ್ತು ವರುಷದ ಬಲಿಪರು ಕಳೆದ ಎಪ್ಪತ್ತು ವರುಷದಿಂದಲೂ ಹಾಡುತ್ತಿದ್ದಾರೆ. ಈಗಲೂ ಭಾಗವತಿಕೆ ಮಾಡುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿಶ್ರೀ ಹನುಮಗಿರಿ ಮೇಳದವರಿಂದದಕ್ಷಾಧ್ವರಗಿರಿಜಾಕಲ್ಯಾಣ ಪ್ರಸಂಗಗಳ ಬಯಲಾಟ ಜರುಗಲಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts