ವಿಶೇಷ ಚೇತನ ಮಕ್ಕಳಿಗೆ ಅನುಕಂಪ ತೋರುವ ಬದಲು ಅವಕಾಶಗಳನ್ನು ನೀಡಬೇಕು, ಅವರ ಹೆತ್ತವರಿಗೆ ಆತ್ಮಸ್ಥೈರ್ಯವನ್ನು ತುಂಬುವ ಕೆಲಸ ಸಮಾಜದಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸರ್ವಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಲಯನ್ಸ್ ಮತ್ತು ಲಯನೆಸ್ ಕ್ಲಬ್, ಲಯನ್ಸ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ಚೇತನ ಮಕ್ಕಳ ಕಲ್ಯಾಣಕ್ಕೆ ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಲಯನ್ಸ್‌ನಂತಹ ಸಂಘ ಸಂಸ್ಥೆಗಳು ಅವುಗಳನ್ನು ಅವರಿಗೆ ತಲುಪಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಎಡಪಡಿತ್ತಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಲಯನ್ಸ್ ಉಪರಾಜ್ಯಪಾಲ ದೇವದಾಸ ಭಂಡಾರಿ, ಸ್ಥಾಪಕಾಧ್ಯಕ್ಷ ಡಾ.ವಸಂತ ಬಾಳಿಗ, ಶಿಕ್ಷಕರ ಸಂಘದ ರಾಜ್ಯ ಪ್ರತಿನಿಧಿ ರಮೇಶ್‌ನಾಯಕ್ ರಾಯಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಲಯನೆಸ್ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ, ಮಧ್ವರಾಜ್ ಕಲ್ಮಾಡಿ, ಜಿಲ್ಲಾ ಸಂಚಾಲಕ ಮೊಯ್ದೀನ್ ಕುಂಞ, ಜಯಂತಿ ಎಸ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕ್ಷೇತ್ರ ಸಂಪನ್ಮೂಲಾಧಿಕಾರಿ ರಾಜೇಶ್ ಸ್ವಾಗತಿಸಿದರು, ಲಯನ್ಸ್ ಕ್ಲಬ್‌ನ ದಾಮೋದರ್ ಬಿ.ಎಂ. ಪ್ರಸ್ತಾವಿಸಿದರು.
Be the first to comment on "ವಿಶೇಷ ಚೇತನ ಮಕ್ಕಳ ಹೆತ್ತವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ: ರೈ"