ಡಿಸೆಂಬರ್ 6 ರಂದು ಬಾಬರಿ ಮಸೀದಿಯ ಕುರಿತಾದ ಕರಾಳ ದಿನ ಹಾಗೂ ವಿಜಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯಿದೆ ಕಲಂ 35 ರಂತೆ ಡಿಸೆಂಬರ್ 6 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಹಾಗೂ ಸಾರ್ವಜನಿಕ/ಧಾರ್ಮಿಕ/ರಾಜಕೀಯ ಬಹಿರಂಗ ಸಭೆ-ಸಮಾರಂಭಗಳನ್ನು, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖೋ ಹಾಗೂ ಮುತ್ತಿಗೆ ಮುಂತಾದವುಗಳನ್ನು ನಿರ್ಬಂಧಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ನಿರ್ಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)