ಮೂಲತಃ ಉಪ್ಪಿನಂಗಡಿಯ ಬಜತ್ತೂರು ನಿವಾಸಿಯಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕ ಪ್ರೊ. ಬಿ. ರಾಧಾಕೃಷ್ಣ (74) ಅಲ್ಪ ಕಾಲದ ಅನಾರೋಗ್ಯದ ಬಳಿಕ ಭಾನುವಾರ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
1966ರಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜು ಪ್ರಾರಂಭವಾದಾಗ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಸೇರಿದ ಅವರು ವಿಭಾಗ ಮುಖ್ಯಸ್ಥರಾಗಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದರು. ನಿವೃತ್ತಿಯ ಬಳಿಕ ಅವರು ಪುತ್ತೂರಿನಲ್ಲಿ ವಾಸ್ತವ್ಯ ಇದ್ದರು. ಭಾನುವಾರ ಸಂಜೆ ಉಪ್ಪಿನಂಗಡಿಯಲ್ಲಿ ಅವರ ಅಂತ್ಯ ಸಂಸ್ಕಾರ ನಡೆಸಲಾಯಿತು.
ಅವರು ಪತ್ನಿ, ಒಬ್ಬ ಮಗ ಮತ್ತು ಒಬ್ಬಳು ಮಗಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)