ಬಂಟ್ವಾಳ: ಬಿ.ಸಿ.ರೋಡ್ ಸ್ಪರ್ಶಾ ಕಲಾ ಮಂದಿರದ ಕವಿಶಿಷ್ಯ ಪಂಜೆ ಮಂಗೇಶರಾವ್ ವೇದಿಕೆ, ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಡಿ.16ರಂದು ಬೆಳಗ್ಗೆ 9.30ರಿಂದ ಸಂಜೆ 4.30ತನಕ ಡಾ. ಏರ್ಯ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10ಕ್ಕೆ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಆಶೀವಚನ ನೀಡಲಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಅವರು ಉದ್ಘಾಟಿಸಲಿದ್ದಾರೆ. ಮೊಡಂಕಾಪು ಚರ್ಚ್‌ನ ಪ್ರಧಾನ ಧರ್ಮಗುರು ವಂ. ಮ್ಯಾಕ್ಸಿಂ ಎಲ್. ನೊರೊನ್ಹಾ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರು ಆಶಯ ನುಡಿಯಲಿದ್ದಾರೆ.
ಬೆಳಗ್ಗೆ 11.25 ರಿಂದ 12.10 ತನಕ ನಡೆಯುವ ಏರ್ಯ: ಬದುಕು-ಬರಹ ಕುರಿತ ಗೋಷ್ಠಿಯನ್ನು ಹಿರಿಯ ಇತಿಹಾಸಕಾರ ಡಾ. ಪುಂಡಿಕಾ ಗಣಪಯ್ಯ ಭಟ್, 12.10ರಿಂದ 12.40 ತನಕ ನಡೆಯುವ ಏರ್ಯರ ಸಹಕಾರಿ ಕ್ಷೇತ್ರದ ಸಾಧನೆ ಕುರಿತ ಗೋಷ್ಠಿಯನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಅಪರಾಹ್ನ 2.30ರಿಂದ 3 ತನಕ ನಡೆಯುವ ಏರ್ಯ ಸಂಘಟನಾ ಕ್ಷೇತ್ರದ ಸಾಧನೆ ಕುರಿತ ಗೋಷ್ಠಿಯನ್ನು ಪ್ರಾಧ್ಯಾಪಕ ಡಾ. ವರದರಾಜ ಚಂದ್ರಗಿರಿ ನಡೆಸಿಕೊಡಲಿದ್ದಾರೆ.
ಸಂಜೆ 3.30ರಿಂದ 4.30 ತನಕ ನಡೆಯುವ ಸಮಾರೋಪದಲ್ಲಿ ನಿಟ್ಟೆ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎನ್. ವಿನಯ ಹೆಗ್ಡೆ, ಯೇನೆಪೊಯ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಾಧಿಪತಿ ಯೆನೆಪೊಯ ಅಬ್ದುಲ್ಲ ಕುಂಞಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವರು ಬೆನ್ನುಡಿ ಸಲ್ಲಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಚಂದ್ರಶೇಖರ ಕೆದಿಲಾಯ ಅವರಿಂದ ಏರ್ಯ ಕಾವ್ಯ ಗಾಯನ ನಡೆಯಲಿದೆ ಎಂದು ಡಾ. ಏರ್ಯ ಸಾಹಿತ್ಯ ಸಂಭ್ರಮ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಸ್ತಕ ಮಾರಾಟ-ಪ್ರದರ್ಶನ:
ಕಾರ್ಯಕ್ರಮ ಪ್ರಯುಕ್ತ ಡಿ.16ಮತ್ತು 17ರಂದು ಪುಸ್ತಕ ಮಾರಾಟ ಮತ್ತು ಪ್ರದರ್ಶನ ನಡೆಯಲಿದ್ದು, ಬೋಳಂತೂರು ಕೃಷ್ಣಪ್ರಭು ಪುಸ್ತಕ ಮಳಿಗೆಯನ್ನು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಚಾಲನೆ ನೀಡಲಿದ್ದಾರೆ. ಡಾ. ಏರ್ಯ ಸಾಕ್ಷ್ಯ ಚಿತ್ರ ಪ್ರದರ್ಶನವನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಉದ್ಘಾಟಿಸಲಿದ್ದಾರೆ.
Be the first to comment on "ಡಿ.16ರಂದು ಬಿ.ಸಿ.ರೋಡಿನಲ್ಲಿ ಡಾ.ಏರ್ಯ ಸಾಹಿತ್ಯ ಸಂಭ್ರಮ"