ಜಾತ್ಯಾತೀತ ನೆಲೆಯಲ್ಲಿ ಸರಕಾರಿ ನೌಕರರು ಕೆಲಸ ಮಾಡಿದಾಗ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ಕೆಲಸ ಮಾಡಲು ಸಾಧ್ಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳ ತಾಲೂಕಿನ ಕರ್ನಾಠಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ತಹಶಿಲ್ದಾರ್ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್, ಸಿವಿಲ್ ಇಂಜಿನಿಯರ್ ರಾಮ್ ಪ್ರಸಾದ್, ಮಾಜಿ ಅಧ್ಯಕ್ಷರುಗಳಾದ ನಾರಾಯಣ ಬೆಳ್ಚಾಪ್ಪಾಡ, ಮೋಹನ್ ರಾವ್, ಸಂಘದ ಖಜಾಂಚಿ ಜೆ.ಜನಾರ್ದನ, ಉಪಾಧ್ಯಕ್ಷರುಗಳಾದ ಸುನಂದ ಕೆ.ಪಿ., ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಸ್ವಾಗತಿಸಿ ಪ್ರಸ್ತಾನೆಗೈದರು. ಕಾರ್ಯದರ್ಶಿ ಕೆ.ರಮೇಶ್ ನಾಯಕ್ ರಾಯಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರನ್ನು ಮತ್ತು ನಿವ್ರತ್ತಿ ಹೊಂದಿದ ಸರಕಾರಿ ನೌಕರರನ್ನು ಗುರುತಿಸಿ ಗೌರವಿಸಲಾಯಿತು.