ಬಂಟ್ವಾಳ

ಡಾ. ನವೀನ್ ಭಟ್ ಕರ್ನಾಟಕ ಕೇಡರ್ ಐಎಎಸ್

www.bantwalnews.com

ಜಾಹೀರಾತು

ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 37ನೇ ಸ್ಥಾನ ಪಡೆದಿದ್ದ ಬಂಟ್ವಾಳ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ – ವಿಜಯಲಕ್ಷ್ಮಿ ದಂಪತಿಯ ಪುತ್ರ ಡಾ.ನವೀನ್ ಭಟ್ ಅವರಿಗೆ ಕರ್ನಾಟಕ ಕೇಡರ್ ಹಂಚಿಕೆಯಾಗಿದೆ.

ಇದರೊಂದಿಗೆ ತರಬೇತಿ ಬಳಿಕ ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೂಡುಬಿದರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಬಂಟ್ವಾಳ ಬಿ.ಸಿ.ರೋಡಿನ ಮೊಡಂಕಾಪುವಿನಲ್ಲಿರುವ ಇನ್‌ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೈಸ್ಕೂಲ್ ಹಾಗೂ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವಿದ್ಯಾಭ್ಯಾಸ ಪಡೆದಿದ್ದಾರೆ. ೨೦೦೯ರಲ್ಲಿ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ನವೀನ್, ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಪೂರೈಸಿದ್ದರು. ಸಿವಿಲ್ ಸರ್ವೀಸ್ ಗೆ ಆಯ್ಕೆಯಾದ ಬಳಿಕ ಕರ್ನಾಟಕದಲ್ಲೇ ಉದ್ಯೋಗ ಕೈಗೊಳ್ಳುವ ಮೂಲಕ ರಾಜ್ಯದಲ್ಲೇ ಸೇವೆ ಸಲ್ಲಿಸುವ ಇರಾದೆಯನ್ನು ನವೀನ್ ವ್ಯಕ್ತಪಡಿಸಿದ್ದರು. ಮೂಲತ: ಉಡುಪಿ ಜಿಲ್ಲೆಯ ಎಲ್ಲೂರಿನವರಾದ ಭಟ್ ಕುಟುಂಬದ ಜೊತೆಗೆ ಇಡೀ ಬಂಟ್ವಾಳಕ್ಕೆ ನವೀನ್ ಕೀರ್ತಿ ತಂದಿದ್ದಾರೆ.

READ MORE ABOUT NAVEEN BHAT:

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ