ಫರಂಗಿಪೇಟೆ

ಸಾಮರಸ್ಯ ನಡಿಗೆಯಲ್ಲಿ ನಾನಾ ಪಕ್ಷಗಳ ಮುಖಂಡರ ಹೆಜ್ಜೆ

www.bantwalnews.com REPORT

REPORT: HARISH MAMBADY

ಜಾಹೀರಾತು

PHOTOS: KISHORE PERAJE

ಜಾಹೀರಾತು

ಜಾಹೀರಾತು

ಜಾಹೀರಾತು

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಾರಥ್ಯದಲ್ಲಿ ಏರ್ಪಡಿಸಲಾದ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಕಾಲ್ನಡಿಗೆ ಜಾಥಾ ಮಂಗಳವಾರ ಬೆಳಗ್ಗೆ ಫರಂಗಿಪೇಟೆಯಿಂದ ಆರಂಭಗೊಂಡಿತು. ನಾನಾ ಪಕ್ಷಗಳ ಮುಖಂಡರು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ, ಸಚಿವ ಯು.ಟಿ.ಖಾದರ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮಾಜಿ ಸಚಿವ, ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ, ಸಿಪಿಎಂ ಮುಖಂಡ ಶ್ರೀರಾಮರೆಡ್ಡಿ, ಡಿವೈಎಫೈ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕಣಚ್ಚೂರು ಮೋನು, ಸಿಪಿಐ ರಾಜ್ಯ ಕಾರ್ಯದರ್ಶಿ ಸಿದ್ಧನಗೌಡ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ರೈತಸಂಘದ ರವಿಕಿರಣ್ ಪುಣಚ, ಮಂಗಳೂರು ಮೇಯರ್ ಕವಿತಾ ಸನಿಲ್, ಶಾಸಕರಾದ ಜೆ.ಆರ್.ಲೋಬೊ, ಕೆ.ಅಭಯಚಂದ್ರ ಜೈನ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ಮಮತಾ ಡಿ.ಎಸ್.ಗಟ್ಟಿ, ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಜೆಡಿಎಸ್ ಮುಖಂಡ ಬಿ.ಮೋಹನ್, ಗೇರು ನಿಗಮ ಅಧ್ಯಕ್ಷ ಬಿ.ಎಚ್.ಖಾದರ್,  ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ದ.ಕ.ಜಿಲ್ಲಾ ಬಸ್ಸು ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ನಾನಾ ಪಕ್ಷಗಳ ಮುಖಂಡರಾದ ಶೇಖರ್, ಸುನಿಲ್ ಕುಮಾರ್ ಬಜಾಲ್, ರಾಮಣ್ಣ ವಿಟ್ಲ, ಸಂಜೀವ ಬಂಗೇರ, ಬಾಬು ಭಂಡಾರಿ, ಬಿ.ನಾರಾಯಣ, ವಾಸುದೇವ ಬೋಳೂರು, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಎಂ.ದೇವದಾಸ್, ಶಾಹುಲ್ ಹಮೀದ್, ಚಂದು ಎಲ್, ತಾಲೂಕು ಪಂಚಾಯತ್ ಸದಸ್ಯರು, ಪುರಸಭಾ ಸದಸ್ಯರು, ಗ್ರಾಮ ಪಂಚಯತ್ ಸದಸ್ಯರ ಸಹಿತ ಪ್ರಮುಖರು ಈ ಸಂದರ್ಭ ಹಾಜರಿದ್ದರು.
ಜಯ ಭಾರತ ಜನನಿಯ ತನುಜಾತೆ ನಾಡಗೀತೆಯ ಬಳಿಕ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಕಾಶ್ ರೈ, ಸೌಹಾರ್ದತೆ, ಶಾಂತಿ ಇಂದಿನ ಅವಶ್ಯಕತೆ ಎಂದು ಹೇಳಿದರು.
ಆರಂಭದಲ್ಲಿ ಜಾಥಾ ಕುರಿತು ಸಚಿವ ಬಿ.ರಮಾನಾಥ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಸಾಮರಸ್ಯಕ್ಕೆ ಕೆಲವರು ಧಕ್ಕೆಯನ್ನುಂಟುಮಾಡುತ್ತಿದ್ದಾರೆ. ಶಾಂತಿಯನ್ನು ಕಾಪಾಡುವುದು ಜಾಥಾ ಉದ್ದೇಶ. ಇಂದು ಕಾಲ್ನಡಿಗೆಯಲ್ಲಿ ಮಾಣಿವರೆಗೆ ಏಕತೆಯಿಂದ ಸಾಗೋಣ. ಹಿಂಸೆಗೆ ಶಾಂತಿಯ ಮೂಲಕ ಉತ್ತರ ನೀಡೋಣ. ವಾಹನಗಳಿಗೆ ಜನರಿಗೆ ತೊಂದರೆ ಉಂಟಾಗದಂತೆ ಜಾಥಾ ನಡೆಯುತ್ತದೆ. ಸಾಮರಸ್ಯ ನಡಿಗೆ ಕೇವಲ ಮಾಣಿವರೆಗೆ ಅಲ್ಲ, ಜೀವನಪರ್ಯಂತ ಜತೆಯಾಗಿ ನಡೆಯೋಣ ಎಂದು ರೈ ಹೇಳಿದರು.

ಜಾಹೀರಾತು

ಬಳಿಕ ವಿವಿಧ ಫಲಕಗಳನ್ನು ಹಿಡಿದುಕೊಂಡ ಸಾರ್ವಜನಿಕರು ಜಾಥಾದಲ್ಲಿ ಮುಂದೆ ಸಾಗಿದರು. ಸಾಮರಸ್ಯದ ಸಂದೇಶ ಸಾರುವ ಫಲಕಗಳು ಕಂಡುಬಂದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ