ಬಾಳ್ತಿಲ ಗ್ರಾಮದ ಕಲ್ಲಡ್ಕ-ಸುಧೆಕಾರು ರಸ್ತೆ ದುರಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅನುದಾನದಲ್ಲಿ ಹಾಗೂ ಬಾಳ್ತಿಲ ಗ್ರಾಮ ಪಂಚಾಯತ್ನಿಂದ ಅನುದಾನದಲ್ಲಿ ಒಟ್ಟು 4.5 ಲಕ್ಷ ರೂ ವೆಚ್ಚದ ರಸ್ತೆ ಕಾಂಕ್ರಿಟೀಕರಣಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ ನೀಡಿದರು.
ಬಿಜೆಪಿ ನಾಯಕರಾದ ರಾಜೇಶ್ ನಾಯಕ್ ಉಳಿಪ್ಪಾಡಿ, ಮಾಜಿ ಶಾಸಕ ಕೆ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ತಾಲೂಕು ಪಂಚಾಯತ್ ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ನಾಯ್ಕ, ಬಿಜೆಪಿ ಮುಖಂಡ ದಿನೇಶ್ ಅಮ್ಟೂರು, ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಬಿ.ಕೆ ಅಣ್ಣು ಪೂಜಾರಿ, ಪಿ.ಎಸ್ ಮೋಹನ್, ಲೋಕಾನಂದ ಪೂಜಾರಿ ಏಳ್ತಿಮಾರು, ಸುರೇಶ್ ಶೆಟ್ಟಿ ಕಾಂದಿಲ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಣ್ಣ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಪ್ರಮುಖ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Be the first to comment on "ಕಲ್ಲಡ್ಕ – ಸುಧೆಕಾರು ರಸ್ತೆ ದುರಸ್ತಿಗೆ ಚಾಲನೆ"