ಮನೆ ನಿವೇಶನ ಜೊತೆಗೆ ವಸತಿಗೂ ಆದ್ಯತೆ: ರಮಾನಾಥ ರೈ

ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಬಸವ ವಸತಿ ಯೋಜನೆ ಸಹಿತ ರಾಜೀವ ಗಾಂಧಿ ವಸತಿ ನಿಗಮ ಮತ್ತಿತರ ಯೋಜನೆಯಡಿ ಜನತೆಗೆ ಮನೆ ನಿವೇಶನ ಜೊತೆಗೆ ಸರ್ಕಾರವು ವಸತಿ ನಿರ್ಮಿಸಲು ಕೂಡಾ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.


ಬಂಟ್ವಾಳ ಪುರಸಭೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಸತಿ ಮಂಜೂರಾತಿ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.

ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಪುರಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು ರೂ 10 ಕೋಟಿಗೂ ಮಿಕ್ಕಿ ಅನುದಾನ ಒದಗಿಸಿದ್ದಾರೆ ಎಂದರು.

ಜಾಹೀರಾತು

ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ರಾಜೀವ ಗಾಂಧಿ ವಸತಿ ನಿಗಮ ಯೋಜನೆಯಡಿ ವಸತಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ರೂ 1.20 ಲಕ್ಷ ಮತ್ತು ಕೇಂದ್ರ ಸರ್ಕಾರದಿಂದ ರೂ 1.50 ಲಕ್ಷ ಹೀಗೆ ಒಟ್ಟು ರೂ 2.70 ಲಕ್ಷ ವೆಚ್ಚದಲ್ಲಿ ಒಟ್ಟು 700 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಿಸಲು ನಾಲ್ಕು ಹಂತದಲ್ಲಿ ಸಹಾಯಧನ ಬಿಡುಗಡೆಯಾಗುತ್ತದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಮೇಲ್ವಿಚಾರಕಿ ಉಮಾವತಿ, ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಜಗದೀಶ ಕುಂದರ್, ಪ್ರವೀಣ ಬಿ., ಮಹಮ್ಮದ್ ಶರೀಫ್, ನಾರ್ಬರ್ಟ್ ಡಿಸೋಜ, ವಸಂತಿ ಚಂದಪ್ಪ, ಜೆಸಿಂತಾ ಡಿಸೋಜ ಮತ್ತು ಆಶ್ರಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮನೆ ನಿವೇಶನ ಜೊತೆಗೆ ವಸತಿಗೂ ಆದ್ಯತೆ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*