ಮಸೀದಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬೋಳಂತೂರು ಗ್ರಾಮದ ಕೆ.ಪಿ ಬೈಲು ನಿವಾಸಿ ಬಶೀರ್ ಅವರ ಪುತ್ರ ಮಹಮ್ಮದ್ ಖೈಸ್(11) ಪಿಕಪ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ.
ಬೋಳಂತೂರು ಕೆ.ಪಿ ಬೈಲು ಎಂಬಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಬೋಳಂತೂರು ಸಮೀಪದ ಕೆ.ಪಿ ಬೈಲು ಎಂಬಲ್ಲಿ ಈದ್ ಮೀಲಾದ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೋಳಂತೂರು ಕಡೆಯಿಂದ ಬಂದ ಪಿಕಪ್ ವಾಹನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುಲಾಗಿದ್ದರೂ ಅಷ್ಟೊತ್ತಿಗೆ ಮೃತಪಟ್ಟಿದ್ದಾರೆ. ಈತ ಸುರಿಬೈಲ್ ಅಶ್-ಅರಿಯ್ಯದಲ್ಲಿ ೫ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕೆ.ಪಿ ಬೈಲ್ ಮದರಸದಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದರು.
ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಕಾಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…