ಬಂಟ್ವಾಳದಲ್ಲಿ ಎಸ್‌ಡಿಪಿಐ ಸಂಭ್ರಮಾಚರಣೆ


ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ವಡಗಾಂವ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಗ್ನೇಶ್ ಮೆವಾನಿ 10 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ ಹರ್ಷದಲ್ಲಿ ಬಿ.ಸಿ.ರೋಡಿನ ಕೈಕಂಬ ಜಂಕ್ಷನ್ ಬಳಿ ಬಂಟ್ವಾಳ ಎಸ್‌ಡಿಪಿಐ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

ಬಂಟ್ವಾಳ ವಿಧಾನ ಸಭಾ ಎಸ್‌ಡಿಪಿ ಅಧ್ಯಕ್ಷ ಶಾಹುಲ್ ಎಸ್.ಎಚ್. ಮಾತನಾಡಿ, ಗುಜರಾತ್ ಚುನಾವಣೆಯಲ್ಲಿ ಜಿಗ್ನೇಶ್‌ರನ್ನು ವಿಜಯಗೊಳಿಸುವುದು ಜಾತ್ಯಾತೀತ ಸಿದ್ಧಾಂತ ಹೊಂದಿರುವ ಎಸ್‌ಡಿಪಿಐ ನಾಯಕರಿಗೆ ಇದೊಂದು ಸವಾಲಗಿತ್ತು. ಜಿಗ್ನೇಶ್ ಪರಮತ ಯಾಚಿಸಲು ಎಸ್‌ಡಿಪಿಯ ನಾಯಕರ ಮತ್ತು ಕಾರ್ಯಕರ್ತರು ತನ್ನ ಅಮೂಲ್ಯವಾದ ಸಮಯವನ್ನು ವಿನಿಯೋಗಿಸಿದ್ದಾರೆ. ಇದರ ಪ್ರತಿಫಲವಾಗಿ ಜಿಗ್ನೇಶ್ ಮೇವಾನಿ ಅವರು ಪ್ರಚಂಡ ಬಹುಮತದಿಂದ ವಿಜಯಿಯಾಗಿದ್ದಾರೆ ಎಂದರು.

ಜಾಹೀರಾತು

ಗುಜರಾತ್ ಚುನಾವಣೆಯಲ್ಲಿ ಜಿಗ್ನೇಶ್ ಮೆವಾನಿಯವರ ವಿಧಾನ ಸಭಾದ ಪ್ರಥಮ ಗೆಲುವಿನೊಂದಿಗೆ ಕರ್ನಾಟಕದಲ್ಲಿ ನಡೆಯುವ ಮುಂದಿನ ಚುನಾವಣೆಯಲ್ಲಿ ಎಸ್‌ಡಿಪಿಐ ಹೊಸ ಇತಿಹಾಸವನ್ನು ನಿರ್ಮಿಸಲು ಇದು ಮುನ್ನಡಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮೆವಾನಿ ಗೆಲುವಿಗೆ ಕಾರಣರಾದ ಕರ್ನಾಟಕ ಹಾಗೂ ಕೇರಳದಿಂದ ಎಸ್‌ಡಿಪಿಯ ನಾಯಕರ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭ ಪ್ರಮುಖರಾದ ಇಸ್ಮಾಯಿಲ್ ಬಾವಾ, ಯೂಸುಫ್ ಆಲಡ್ಕ, ಮಾಲಿಕ್ ಕೊಳಕೆ, ಪುರಸಭಾ ಸದಸ್ಯ ಮುನೀಶ್ ಅಲಿ ಮತ್ತಿತರರು ಇದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಎಸ್‌ಡಿಪಿಐ ಸಂಭ್ರಮಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*