ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಫ್ರೌಢ ಶಾಲೆ ಶಂಭೂರು ವಾರ್ಷಿಕೋತ್ಸವ ಸಂಭ್ರಮ ಮತ್ತು ಪ್ರತಿಭಾ ಪುರಸ್ಕಾರ -2017 ಡಿ.23ರಂದು ಶನಿವಾರ ನಡೆಯಲಿದೆ.
ಬೆಳಿಗ್ಗೆ ಗಂಟೆ 9.30ಕ್ಕೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ವಹಿಸಲಿದ್ದು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಬಾಗೀಯ ನಿಯಂತ್ರಣಾಧಿಕಾರಿ ದೀಪಕ್ ಕುಮಾರ್ ಧ್ವಜಾರೋಹಣ ಮಾಡಲಿದ್ದಾರೆ.
ಧಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ನಿರ್ದೇಶಕ ಬಿ.ಎ ಸತ್ಯನಾರಾಯಣ ಅವರು ಪಥಸಂಚಲನ ಗೌರವ ಸ್ವೀಕಾರಿಸಲಿದ್ದು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ಅನುವಂಶಿಕ ಅರ್ಚಕರಾದ ಶ್ರೀ ಹರಿನಾರಾಣದಾಸ ಅಸ್ರಣ್ಣ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ
ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಜಯರಾಜ್, ಗೀತಾ, ವಿಶಾಲಾಕ್ಷಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್, ಬಂಟ್ವಾಳ ರೋಟರೀ ಕ್ಲಬ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಡಾ ಸುಬ್ರಹ್ಮಣ್ಯ ಭಟ್ ನರಿಕೊಂಬು, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ, ಶೇಡಿಗುರಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶಂಭೂರು ಅಧ್ಯಕ್ಷ ಕೇಶವ ಪದವು, ಶಂಭೂರು ಶ್ರೀ ದುರ್ಗಾಪರಮೇಶ್ವರೀ ಮಹಿಳಾ ಮಂಡಳಿಯ ಅಧ್ಯಕ್ಷೆ ಸುನೀತ ಪದ್ಮನಾಭ ರೆಂಜಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾತ್ರಿ 8 ಗಂಟೆಗೆ ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವಹಿಸಲಿದ್ದು ಹಸ್ತಪತ್ರಿಕೆ ಬಿಡುಗಡೆಯನ್ನು ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಾಲಾ ನಾಟಕ ತಂಡಕ್ಕೆ ಗೌರವಾರ್ಪಣೆಯನ್ನು ಮಂಗಳೂರು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಭಂಡಾರಿ ನೆರವೇರಿಸಲಿದ್ದಾರೆ.
ನರಿಕೊಂಬು ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಗೋಳ್ತಮಜಲು ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಕರ್ನಾಟಕ ಸರಕಾರದ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ನಾರಾಯಣ ಗೌಡ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ, ಭೂ ಅಭಿವೃಧ್ದಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಬಂಟ್ವಾಳ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ್ ಕಾರಂತ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧೀರಜ್, ಉದ್ಯಮಿ ಎನ್ ಪದ್ಮನಾಭ ಮಯ್ಯ , ಪತ್ರಕರ್ತರಾದ ರಾಜಾ ಬಂಟ್ವಾಳ, ಹರೀಶ ಮಾಂಬಾಡಿ ಮುಖ್ಯ ಅತಿಥಿಗಳಾಗಿದ್ದಾರೆ.
ಸಂಜೆ ಗಂಟೆ 6ಕ್ಕೆ ಶಾಲಾ ಮಕ್ಕಳಿಂದ ನೃತ್ಯ ವೈವಿದ್ಯ, ತುಳು ಜಾನಪದ ಲೋಕ, ಯಕ್ಷಗಾನ -ಶ್ವೇತ ವರಾಹ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿಷ್ಕಿಂದ ಕೌತುಕ ಯಕ್ಷ ನಾಟಕವು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಶಾಲಾ ಕಾರ್ಯಾಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಮತ್ತು ಮುಖ್ಯೋಪಾಧ್ಯಾಯ ಕಮಲಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.