ವಿಜಯ ಕರ್ನಾಟಕ ಮಂಗಳೂರು, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ದ.ಕ, ಐಸಿಎಆರ್-ಕಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೆತ ದಿನಾಚರಣೆ ಹಿನ್ನೆಲೆಯಲ್ಲಿ ‘ಕಲ್ಪವಕ್ಷಕ್ಕೆ ಕೀಟ ಕಾಟ’ ರೆತ, ವಿಜ್ಞಾನಿ, ಅಧಿಕಾರಿ, ಮಾಧ್ಯಮಗಳ ಮುಕ್ತ ಸಂವಾದ ಕಾರ್ಯಕ್ರಮ ಡಿ.21ರಂದು ನಗರದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ಜೆ.ಆರ್. ಲೋಬೋ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್, ದ.ಕ. ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್.ರವಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್, ಕಷಿ ಇಲಾಖೆ ಜಂಟಿ ನಿರ್ದೇಶಕ ಹೆಚ್. ಕೆಂಪೇಗೌಡ, ಬೆಂಗಳೂರು ಎನ್.ಬಿ.ಎ.ಐ.ಆರ್ ಮುಖ್ಯ ವಿಜ್ಞಾನಿ ಡಾ. ಶೆಲೇಶ್, ಬ್ರಹ್ಮಾವರ ವ.ಕ.ತೋ.ಸಂ.ಕೇಂದ್ರ ಸಂಶೋಧನಾ ನಿರ್ದೇಶಕ ಡಾ. ಎಸ್. ವಿ. ಪಾಟೀಲ್ ಭಾಗವಹಿಸಲಿದ್ದಾರೆ. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಕುಮಾರ್ ಮಗದ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಹೆಚ್.ಆರ್. ನಾಯ್ಕ, ವಿಜಯ ಕರ್ನಾಟಕ ಪತ್ರಿಕೆ ಸ್ಥಾನೀಯ ಸಂಪಾದಕ ಯು.ಕೆ. ಕುಮಾರ್‌ನಾಥ್ ಉಪಸ್ಥಿತರಿರುವರು.
‘ಕಲ್ಪವೃಕ್ಷಕ್ಕೆ ಕೀಟ-ಕಾಟ’ ಮುಕ್ತ ಸಂವಾದ
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ರೈತರು ಭಾಗವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿಜಯ ಕರ್ನಾಟಕ ನಡೆಸಿದ ‘ಕಲ್ಪವೃಕ್ಷಕ್ಕೆ ಕೀಟ-ಕಾಟ’ ಅಭಿಯಾನಕ್ಕೆ ಸಂಬಂಧಿಸಿ ಅಧಿಕಾರಿಗಳು ಈ ರೋಗದ ಮಾಹಿತಿ, ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆ ಬಳಿಕ ರೈತರೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಚರ್ಚೆಯಲ್ಲಿ ಭಾಗವಹಿಸಲು ರೈತರಿಗೆ ಮುಕ್ತ ಅವಕಾಶವಿದ್ದು, ಹೆಚ್ಚಿನ ವಿವರಕ್ಕೆ ಶಿವಕುಮಾರ್ ಮಗದ (9945783906), ಡಾ. ಹೆಚ್.ಆರ್. ನಾಯ್ಕ (9591417218) ಮಾಹಿತಿ ಪಡೆದುಕೊಳ್ಳಬಹುದು.