ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಸುವ ಪೋಷಕರು ತಮ್ಮ ಪ್ರವೃತ್ತಿಯನ್ನು ಬಿಡಬೇಕು. ಅವರೊಳಗಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಎಂದು ಉಜಿರೆ ಎಸ್.ಡಿ.ಎಂ.ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಡಾ. ಬಿ.ಪಿ.ಸಂಪತ್ ಕುಮಾರ್ ಹೇಳಿದರು.
ಅವರು ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲೀಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್‍ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಬುದ್ಧಿವಂತಿಕೆಯಿಂದ ಅಳೆಯಲು ಸಾಧ್ಯವಿಲ್ಲ. ಬುದ್ಧಿವಂತಿಕೆಗಿಂತ ಹೃದಯವಂತಿಕೆ ಮುಖ್ಯ. ಇಂದಿನ ಮಕ್ಕಳಲ್ಲಿ ಮೌಲ್ಯಗಳ ಕೊರತೆಯಿದೆ. ಅವರಿಗೆ ವೈಯುಕ್ತಿಕ, ಸಾಮಾಜಿಕ, ಕೌಟುಂಬಿಕ ಮೌಲ್ಯಗಳ ಅರಿವು ಉಂಟಾಗಬೇಕಿದೆ ಎಂದು ಅವರು ಹೇಳಿದರು.
ಶಾಲಾ ಸಂಚಾಲಕ ಭಾಮಿ ವಿಠಲ್ ದಾಸ್ ಶೆಣೈ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ ಮಲ್ಯ, ಶಾಲಾ ಪ್ರಾಂಶುಪಾಲೆ ರಮಾ ಶಂಕರ್ ಸಿ ಉಪಸ್ಥಿತರಿದ್ದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರೀಯ ಶಿಕ್ಷಣ ಮಂಡಳಿ ನಡೆಸಿದ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಎ ಗ್ರೇಡ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಅನಿತಾ ಮರಿಯಾ ಮಿನೆಜಸ್ ಸ್ವಾಗತಿಸಿ, ಜೂಲಿ ಟಿ ಜೆ ವಂದಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ನಾಯಕರಾದ ಜೆನಿವಾ ವೆಸ್ಲಿಯಾ ವಾಸ್ ಹಾಗೂ ನಿನಾದ್ ಶೆಟ್ಟಿ ಕಾರ್‍ಯಕ್ರಮ ನಿರೂಪಿಸಿದರು. ಸಭಾ ಕಾರ್‍ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ಜರುಗಿತು.
Be the first to comment on "ಇತರರೊಂದಿಗೆ ಮಕ್ಕಳನ್ನು ಹೋಲಿಸದಿರಿ: ಸಂಪತ್ ಕುಮಾರ್"