ಬಂಟ್ವಾಳ

ಇತರರೊಂದಿಗೆ ಮಕ್ಕಳನ್ನು ಹೋಲಿಸದಿರಿ: ಸಂಪತ್ ಕುಮಾರ್

ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಸುವ ಪೋಷಕರು ತಮ್ಮ ಪ್ರವೃತ್ತಿಯನ್ನು ಬಿಡಬೇಕು. ಅವರೊಳಗಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಎಂದು ಉಜಿರೆ ಎಸ್.ಡಿ.ಎಂ.ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಡಾ. ಬಿ.ಪಿ.ಸಂಪತ್ ಕುಮಾರ್ ಹೇಳಿದರು.

ಜಾಹೀರಾತು

ಅವರು ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲೀಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್‍ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಬುದ್ಧಿವಂತಿಕೆಯಿಂದ ಅಳೆಯಲು ಸಾಧ್ಯವಿಲ್ಲ. ಬುದ್ಧಿವಂತಿಕೆಗಿಂತ ಹೃದಯವಂತಿಕೆ ಮುಖ್ಯ. ಇಂದಿನ ಮಕ್ಕಳಲ್ಲಿ ಮೌಲ್ಯಗಳ ಕೊರತೆಯಿದೆ. ಅವರಿಗೆ ವೈಯುಕ್ತಿಕ, ಸಾಮಾಜಿಕ, ಕೌಟುಂಬಿಕ ಮೌಲ್ಯಗಳ ಅರಿವು ಉಂಟಾಗಬೇಕಿದೆ ಎಂದು ಅವರು ಹೇಳಿದರು.

ಶಾಲಾ ಸಂಚಾಲಕ ಭಾಮಿ ವಿಠಲ್ ದಾಸ್ ಶೆಣೈ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ ಮಲ್ಯ, ಶಾಲಾ ಪ್ರಾಂಶುಪಾಲೆ ರಮಾ ಶಂಕರ್ ಸಿ ಉಪಸ್ಥಿತರಿದ್ದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರೀಯ ಶಿಕ್ಷಣ ಮಂಡಳಿ ನಡೆಸಿದ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಎ ಗ್ರೇಡ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಅನಿತಾ ಮರಿಯಾ ಮಿನೆಜಸ್ ಸ್ವಾಗತಿಸಿ, ಜೂಲಿ ಟಿ ಜೆ ವಂದಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ನಾಯಕರಾದ ಜೆನಿವಾ ವೆಸ್ಲಿಯಾ ವಾಸ್ ಹಾಗೂ ನಿನಾದ್ ಶೆಟ್ಟಿ ಕಾರ್‍ಯಕ್ರಮ ನಿರೂಪಿಸಿದರು. ಸಭಾ ಕಾರ್‍ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ಜರುಗಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts